ಹೆತ್ತ ತಾಯಿಯ ಎದುರೇ ಪವನ್ ಕುಮಾರ್ ಮೇಲೆ ಮಾರಕ ದಾಳಿ
ಬೆಂಗಳೂರು: ರೌಡಿಶೀಟರ್ ಪವನ್ ಕುಮಾರ್‌ನನ್ನು ಆತನ ತಾಯಿಯ ಕಣ್ಣೆದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ನಗರದ ಥಣಿಸಂದ್ರ ವ್ಯಾಪ್ತಿಯ ಅಮರಜ್ಯೋತಿ ಲೇಔಟ್‌ನಲ್ಲಿ ನಡೆದಿದೆ. ಡಿಜೆ ಹಳ್ಳಿಯ ಕಪಿಲ್ ಕೊಲೆಯಲ್ಲಿ ಭಾಗಿಯಾಗಿದ್ದ ಪವನ್ ಕುಮಾರ್ ಎನ್ನುವಾತನನ್ನೇ ಆತನ ತಾಯಿ ಎದುರೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೂರು ವರ್ಷಗಳ ಹಿಂದಿನ ಕಪಿಲ ಎಂಬಾತನ ಕೊಲೆಗೆ ಸೇಡಿಗಾಗಿ ನಡೆದ ರಿವೇಂಜ್ ಮರ್ಡರ್ ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೂರು ಬೈಕ್‌ಗಳಲ್ಲಿ ಹೆಲ್ಮೆಟ್ ಧರಿಸಿಕೊಂಡು ಬಂದಿದ್ದ ಆರು ಮಂದಿ ದುಷ್ಕರ್ಮಿಗಳು, ಪವನ್ ಕುಮಾರ್ ಮನೆ ಬಳಿ ದಾಳಿ ನಡೆಸಿದ್ದಾರೆ. ಪವನ್ ಮನೆಗೆ ಬಂದು ನಿಂತ ಕ್ಷಣದಲ್ಲೇ, ಆತನ ಹೆತ್ತ ತಾಯಿಯ ಕಣ್ಣೆದುರಿನಲ್ಲೇ ಮಾರಕಾಸ್ತ್ರಗಳಿಂದ ಮನಬಂದತೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಇನ್ನು ಹೆತ್ತ ಮಗನನ್ನು ರಕ್ಷಿಸಲು ತಾಯಿ ಮುಂದಾಗಿದ್ದರೂ ಪ್ರಯೋಜನವಾಗಲಿಲ್ಲ.
ರಿವೇಂಜ್ ಗೆ ನಡೀತಾ ಪವನ್ ಮರ್ಡರ್?
ಕಳೆದ ಮೂರು ವರ್ಷದ ಹಿಂದೆ ಡಿಜೆ ಹಳ್ಳಿಯ ಕಪಿಲ ಎಂಬಾತನ ಕೊಲೆ ನಡೆದಿತ್ತು. ಜುಲೈ 11 ,2023 ರಲ್ಲಿ ಕಪಿಲ ಎಂಬಾತನನ್ನು ಡಿಜೆ ಹಳ್ಳಿ ಬಳಿ ಹತ್ಯೆಯಾಗಿತ್ತು. ಅದೇ ಕೇಸ್ ನಲ್ಲಿ ಮೃತ ಪವನ್ ಕುಮಾರ್ A5 ಆರೋಪಿ ಆಗಿದ್ದ. ಕಪಿಲನ ಕೊಲೆ ಮಾಡಿದಾಗಲೂ ಮುಖ ತೋರಿಸದೆ ಹೆಲ್ಮೆಟ್ ಹಾಕಿಕೊಂಡು ಬಂದು 6 ಜನ ಕೊಚ್ಚಿ ಕೊಲೆ ಮಾಡಿದ್ದರು.ಅದೇ ಮಾದರಿಯಲ್ಲಿ ಬಂದು ಪವನ್ ಕುಮಾರ್ ಕೊಚ್ಚಿ ಕೊಲೆ ಮಾಡಲಾಗಿದೆ. ಕಪಿಲನ ತಮ್ಮ ಪ್ರೇಮ್ ಸೇರಿದಂತೆ ಹಲವರ ಮೇಲೆ ಅನುಮಾನವಿದ್ದು,ಪ್ರೇಮ್ ಫಾಲೋ ಮಾಡ್ತಿದ್ದಾನೆ ಎಂದು ತಾಯಿ ಬಳಿ ಪವನ್ ಹೇಳಿಕೊಂಡಿದ್ದ. ಹೀಗಾಗಿ ರಿವೆಂಜ್ ಗಾಗಿ ಅದೇ ಮಾದರಿಯಲ್ಲಿ ಪವನ್ ಕುಮಾರ್ ಕೊಲೆ ನಡೆಯಿತಾ ಎಂಬ ಅನುಮಾನ ಬಲವಾಗಿದೆ.
ಇನ್ನು ಪವನ್ ಹತ್ಯೆ ಪ್ರಕರಣದ ಬಗ್ಗೆ ಈಶಾನ್ಯ ವಿಭಾಗದ ಡಿಸಿಪಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಪವನ್ ಎಂಬಾತನನ್ನ ಆತನ ಮನೆಗೆ ಬರುವಾಗ ಫಾಲೋ ಮಾಡಿದ್ದಾರೆ.
For More Updates Join our WhatsApp Group :
https://chat.whatsapp.com/JVoHqE476Wn3pVh1gWNAcH
.




