32 ಇಲಾಖೆಗಳ ಖಾಲಿ ಹುದ್ದೆ ಭರ್ತಿಗೆ ಸರ್ಕಾರದ ಮಂಜೂರಾತಿ.
ಬೆಂಗಳೂರು: ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾಕಾಶಿ ಧಾರವಾಡದಲ್ಲಿ ಈ ಹಿಂದೆಯೂ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು. ಆದರೂ ಸರ್ಕಾರ ಯಾವುದೇ ಕ್ರಮಕೈಗೊಳ್ಳದಿದ್ದರಿಂದ ರೊಚ್ಚಿಗೆದ್ದ ಯುವಕರು ಸರ್ಕಾರದ ವಿರುದ್ಧ ಮತ್ತೆ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಯುವಕರ ಕಿಚ್ಚು ಜೋರಾಗುತ್ತಿದ್ದಂತೆಯೇ ಇತ್ತ ಕರ್ನಾಟಕ ಆರ್ಥಿಕ ಇಲಾಖೆ 24 ಸಾವಿ ಹುದ್ದೆಗಳ ನೇಮಕಾತಿಗೆ ನೇಮಕಾತಿಗೆ ಮಂಜೂರಾತಿ ನೀಡಿದೆ.
ಕರ್ನಾಟಕದ ವಿವಿಧ ಒಟ್ಟು 32 ಇಲಾಖೆಯಲ್ಲಿ 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಮಂಜೂರಾತಿ ನೀಡಿದೆ. ಎ ದರ್ಜೆಯ 542 ಹುದ್ದೆ, ಬಿ ದರ್ಜೆಯ 619 ಹುದ್ದೆ ಹಾಗೂ ಎಫ್ ಡಿ ಸಿ ದರ್ಜೆಯ 23119 ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಕ್ಲಿಯರೆನ್ಸ್ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಉದ್ಯೋಗಕ್ಕಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ನಿರುದ್ಯೋಗಿಗಳ ಮುಖದಲ್ಲಿ ಮಂದಹಾಸ ಮೂಡುವಂಥ ತೀರ್ಮಾನವನ್ನು ಸರ್ಕಾರ ತೆಗದುಕೊಂಡಿದೆ.
ರಾಜ್ಯದ ವಿವಿಧ ಇಲಾಖೆಗಳಲ್ಲಿ 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿದ್ದು ಹಂತ ಹಂತವಾಗಿ ಭರ್ತಿ ಮಾಡುವುದಾಗಿ ಈ ಹಿಂದೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದರು. ಇನ್ನು ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲಾಗಿದ್ದು, 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಅಧಿಸೂಚನೆಗಳಿಗೆ ಇದು ಅನ್ವಯವಾಗಲಿದೆ.
ಧಾರವಾಡದ ಬೃಹತ್ ಪ್ರತಿಭಟನೆಗೆ ಸಿಎಂ ಪ್ರತಿಕ್ರಿಯೆ
ಇನ್ನು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಸಾವಿರಾರು ವಿದ್ಯಾರ್ಥಿಗಳು ಧಾರವಾಡದಲ್ಲಿ ನಡೆಸುತ್ತಿರುವ ಬೃಹತ್ ಉಗ್ರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಸುದೀರ್ಘ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ, ಪ್ರತಿಯೊಂದು ಅರ್ಜಿಯ ಹಿಂದೆ ಒಂದು ಕುಟುಂಬದ ಭರವಸೆ ಮತ್ತು ವರ್ಷಗಳ ಪರಿಶ್ರಮವಿರುತ್ತದೆ ಎಂಬುದು ನನಗೆ ತಿಳಿದಿದೆ. ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ ಮತ್ತು ಹತಾಶೆಯನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ನಿಮ್ಮ ಭವಿಷ್ಯ ನಮಗೆ ಅತ್ಯಂತ ಮುಖ್ಯವಾಗಿದೆ .
For More Updates Join our WhatsApp Group :



