‘ಹಿಂದೂ ಸಂಗಮ’ ವೇದಿಕೆಯಿಂದ ಎರಡನೇ ಇನ್ನಿಂಗ್ಸ್ ಸುಳಿವು
ಶಿವಮೊಗ್ಗ : ಮಾರ್ಚ್ 8ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆಯಲಿರುವ ‘ಹಿಂದೂ ಸಂಗಮ’ ಕಾರ್ಯಕ್ರಮದಲ್ಲಿ ಅನಂತ್ ಕುಮಾರ್ ಹೆಗಡೆ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಹೀಗಾಗಿ ತಮ್ಮ ಹಳೆಯ ರಣಕಣವೆಂದೇ ಗುರುತಿಸಿಕೊಂಡಿರುವ ಭಟ್ಕಳದಿಂದಲೇ ಅವರು ತಮ್ಮ ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದಾರಾ ಎನ್ನುವ ಪ್ರಶ್ನೆ ಉದ್ಭವಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ. ಶ್ರೀರಾಮುಲು, ಅನಂತ್ ಕುಮಾರ್ ಹೆಗಡೆ ಅವರ ರಾಜಕೀಯ ಮರುಪ್ರವೇಶವನ್ನು ಸ್ವಾಗತಿಸಿದ್ದಾರೆ. ಲೋಕಸಭೆ ಚುನಾವಣೆಯ ನಂತರ ಅಜ್ಞಾತವಾಸದಲ್ಲಿರುವ ಅನಂತ್ ಕುಮಾರ್ ಹೆಗಡೆ ಅವರನ್ನು ಹಿಂದು ಫೈರ್ ಬ್ರಾಂಡ್ ಎಂದು ಬಣ್ಣಿಸಿದ ಅವರು, ಕರಾವಳಿ ಪ್ರದೇಶದಲ್ಲಿ ಅವರಿಗೆ ಉತ್ತಮ ಹೆಸರಿದೆ ಮತ್ತು ಯುವಕರಲ್ಲಿ ಅಪಾರ ಜನಪ್ರಿಯತೆ ಇದೆ. ಅವರು ಮತ್ತೆ ಪಕ್ಷದಲ್ಲಿ ಸಕ್ರಿಯರಾಗುವುದನ್ನು ಎಲ್ಲರೂ ಸ್ವಾಗತಿಸುತ್ತಾರೆ ಎಂದು ತಿಳಿಸಿದ್ದಾರೆ.
For More Updates Join our WhatsApp Group :




