ಕ್ಯಾಶಿಯರ್ ಸೇರಿ ಇಬ್ಬರು ಬಂಧನ, 81 ಲಕ್ಷ ರೂ. ವಶ
ಬೆಂಗಳೂರು : ಸದಾಶಿವನಗರದಲ್ಲಿರುವ ಬಿಲ್ಡರ್ ನರಸಿಂಹ ಅವರ ಕಚೇರಿಯಲ್ಲಿ ನಡೆದ 91.76 ಲಕ್ಷ ರೂಪಾಯಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಚೇರಿಯ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಧನಂಜಯ್ ಮತ್ತು ಅವನ ಸ್ನೇಹಿತ ಪ್ರವೀಣ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಪೊಲೀಸರ ತನಿಖೆಯಿಂದಾಗಿ ಆರೋಪಿಗಳನ್ನು ಬಂಧಿಸಲಾಗಿದ್ದು, ಕಳ್ಳತನವಾದ ಒಟ್ಟು 91,76,000 ರೂಪಾಯಿಗಳ ಪೈಕಿ 81,66,000 ರೂಪಾಯಿಗಳನ್ನು ವಸೂಲಿ ಮಾಡಲಾಗಿದೆ.
ಇನ್ನೂ ಇಬ್ಬರು ಆರೋಪಿಗಳು ಪತ್ತೆಯಾಗಬೇಕಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ತಾಂತ್ರಿಕ ಆಧಾರಗಳ ಮೇಲೆ ತನಿಖೆ ನಡೆಸಿ, ಬಹುಬೇಗ ಹಣವನ್ನು ವಸೂಲಿ ಮಾಡಿದ ಸದಾಶಿವನಗರ ಪೊಲೀಸರ ತಂಡದ ಕಾರ್ಯಕ್ಕೆ ಸೀಮಂತ್ ಕುಮಾರ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
For More Updates Join our WhatsApp Group :




