ಪೋಕ್ಸೋ ಕೇಸ್‌ಗೆ ತೀವ್ರ ತಿರುವು.

ಪೋಕ್ಸೋ ಕೇಸ್‌ಗೆ ತೀವ್ರ ತಿರುವು.

ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಗಡುವು

ಯಾದಗಿರಿ: ಬಾಲಕಿ ಜೊತೆ ಅನುಚಿತ ವರ್ತನೆ ತೋರಿದ ಪ್ರಕರಣದಲ್ಲಿ ಯಾದಗಿರಿಯ ಮಹಲ್ ರೋಜಾ ಮಠದ ಸ್ವಯಂ ಘೋಷಿತ ದೇವಮಾನ ಮಲ್ಲಿಕಾರ್ಜುನ ಮುತ್ಯಾಗೆ ಬಂಧನ ಭೀತಿ ಎದುರಾಗಿದೆ. ವಿಚಾರಣೆಗೆ ಹಾಜರಾಗುವಂತೆ ಯಾದಗಿರಿ ಪೊಲೀಸರು ನೋಟಿಸ್ ನೀಡಿದರೂ ಮುತ್ಯಾನ ಸುಳಿವಿಲ್ಲ. ಇಂದು (ಫೆಬ್ರವರಿ 27) ಬೆಳಗ್ಗೆಮುತ್ಯಾ ಹಾಜರಾಗಲಿದ್ದಾನೆ ಎಂದು ಹೇಳಲಾಗಿತ್ತು. ಆದರೆ, ಮುತ್ಯಾ ಮಾತ್ರ ಪತ್ತೆ ಇಲ್ಲ. ಬದಲಾಗಿ ಪೋಕ್ಸೋ ಕೇಸ್ ರದ್ದು ಕೋರಿ ಮುತ್ಯಾ ಹೈಕೋರ್ಟ್ ಮೊರೆ ಹೋಗಿದ್ದಾನೆ. ಹೈಕೋರ್ಟ್ ಕಲಬುರಗಿ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದು, ಸೋಮವಾರ ವಿಚಾರಣೆ ನಡೆಯಲಿದೆ.ಪೋಷಕರೇ ದೂರು ನೀಡಿಲ್ಲ, ಆದ್ರೂ ಎಫ್​ಐಆರ್ ದಾಖಲಿಸಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಇನ್ನೊಂದೆಡೆ ಸ್ವಯಂ ಘೋಷಿತ ದೇವಮಾನ ಮಲ್ಲಿಕಾರ್ಜುನ ಮುತ್ಯಾ ಮೇಲೆ ಪೋಕ್ಸೋ ಕೇಸ್ ದಾಖಲಿಸಿರೋದು ಭಕ್ತರನ್ನು ಕೆರಳಿಸಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಜಾ ಮಠದ ಆವರಣದಲ್ಲಿ ಭಕ್ತರು ಮಹತ್ವದ ಸಭೆ ನಡೆಸಿದ್ದು, ಮುಂದಿನ‌ ಕಾನೂನು ಹೋರಾಟ ಸೇರಿ ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಿದರು. ಅಲ್ಲದೇ ಇದೇ ವೇಳೆ ಕೇಸ್ ವಾಪಸ್ ತೆಗೆದುಕೊಳ್ಳಲು ಯಾದಗಿರಿ ಜಿಲ್ಲಾಡಳಿತಕ್ಕೆ ಎರಡು ದಿನಗಳ ಗಡುವು ನೀಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *