ಏಪ್ರಿಲ್ 1ರ ಮಧ್ಯರಾತ್ರಿ ವಿಶ್ವವಿಖ್ಯಾತ ಶಕ್ತ್ಯೋತ್ಸವ.
ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವ ನಗರದ ಸಾಂಸ್ಕೃತಿಕ, ಐತಿಹಾಸಿಕ ಪರಂಪರೆಯ ಹೆಗ್ಗುರುತು. ಹೂವಿನ ದಂಡನ್ನ ಹೊತ್ತು ಸಾಗುವ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಇದೀಗ ದಿನಾಂಕ ಫಿಕ್ಸ್ ಆಗಿದೆ. ಏಪ್ರಿಲ್ 1ರ ಮಧ್ಯರಾತ್ರಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಆ ಮೂಲಕ ದಿನಗಣನೆ ಆರಂಭವಾಗಿದೆ. ಇನ್ನು 16ನೇ ಬಾರಿಗೆ ಅರ್ಚಕರು ಎ.ಜ್ಞಾನೇಂದ್ರಸ್ವಾಮಿ ಬೆಂಗಳೂರು ಕರಗ ಹೊರಲಿದ್ದಾರೆ.
ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿ
ಧರ್ಮರಾಯ ಸ್ವಾಮಿ ದೇವಾಲಯದ ನೂತನ ವ್ಯವಸ್ಥಾಪನಾ ಸಮಿತಿಯಿಂದ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿಪಡಿಸಲಾಗಿದೆ. ಮಾರ್ಚ್ 24ರಂದು ಧ್ವಜಾರೋಹಣದ ಮೂಲಕ ಉತ್ಸವಕ್ಕೆ ಚಾಲನೆ ಸಿಗಲಿದೆ. ಮಾರ್ಚ್ 30ರಂದು ಹಸಿಕರಗ ನಡೆಯಲಿದೆ. ಬಳಿಕ ಏಪ್ರಿಲ್ 1ರ ಮಧ್ಯರಾತ್ರಿ ಬೆಂಗಳೂರು ಕರಗ ಶಕ್ತ್ಯೋತ್ಸವ ನಡೆಯಲಿದೆ. ಇನ್ನು ಒಟ್ಟು 11 ದಿನಗಳ ಕಾಲ ಬೆಂಗಳೂರು ಕರಗ ಶಕ್ತ್ಯೋತ್ಸವ ನಡೆಯಲಿದೆ. ಕಳೆದ ವರ್ಷ ಬೆಂಗಳೂರು ಕರಗ ಹೊತ್ತಿದ್ದ ಅರ್ಚಕರು ಎ.ಜ್ಞಾನೇಂದ್ರ ಸ್ವಾಮಿ ಅವರು 16ನೇ ಬಾರಿಗೆ ಕರಗ ಹೊರಲಿದ್ದಾರೆ.
ಸಿಲಿಕಾನ್ ಸಿಟಿಯ ವಿಶ್ವವಿಖ್ಯಾತ ಕರಗ ಮಹೋತ್ಸವಕ್ಕೆ ಸದ್ಯ ದಿನಾಂಕ ನಿಗದಿಯಾಗಿದೆ. ಆ ಮೂಲಕ ಸಿಟಿ ಮದಿ ಕರಗ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ಬೆಂಗಳೂರು ಕರಗ ದಕ್ಷಿಣ ಭಾರತದ ಅತ್ಯಂತ ಪುರಾತನ ಮತ್ತು ವೈಶಿಷ್ಟ್ಯಪೂರ್ಣ ಹಬ್ಬಗಳಲ್ಲಿ ಒಂದಾಗಿದೆ. ಸುಮಾರು ಶತಮಾನಗಳ ಪರಂಪರೆಯನ್ನು ಹೊಂದಿರುವ ಈ ಆಚರಣೆ, ದ್ರೌಪದಿ ದೇವಿಯ ಭಕ್ತಿಭಾವದೊಂದಿಗೆ ಆಳವಾದ ಸಂಪರ್ಕ ಹೊಂದಿದೆ. ಪ್ರತೀ ವರ್ಷ ಚೈತ್ರ ಮಾಸದ ಪೌರ್ಣಮಿಯ ಸಂದರ್ಭದಲ್ಲಿ ನಡೆಯುವ ಈ ಉತ್ಸವವು ಸಾಮಾನ್ಯವಾಗಿ 9 ರಿಂದ 11 ದಿನಗಳವರೆಗೆ ನಡೆಯುತ್ತದೆ.
For More Updates Join our WhatsApp Group :




