ಯಾವುದೇ ಆತಂಕವಿಲ್ಲ, ಎಲ್ಲರನ್ನು ಸುರಕ್ಷಿತವಾಗಿ ಕರೆತರುತ್ತೇವೆ: ಪ್ರಲ್ಹಾದ್ ಜೋಶಿ

ಯಾವುದೇ ಆತಂಕವಿಲ್ಲ, ಎಲ್ಲರನ್ನು ಸುರಕ್ಷಿತವಾಗಿ ಕರೆತರುತ್ತೇವೆ: ಪ್ರಲ್ಹಾದ್ ಜೋಶಿ

ಇರಾನ್-ಇಸ್ರೇಲ್ ಯುದ್ಧದ ನಡುವೆ ಕರ್ನಾಟಕದವರು ಹಾಗೂ ಭಾರತೀಯರ ರಕ್ಷಣೆಗೆ ಕೇಂದ್ರ ಸಜ್ಜು

ನವದೆಹಲಿ: ಇರಾನ್-ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ಸಂಕಷ್ಟದಲ್ಲಿ ಸಿಲುಕಿದ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಅಲ್ಲಿನ ರಾಯಭಾರಿ ಕಚೇರಿ ಉನ್ನತ ಅಧಿಕಾರಿಗಳ ಜತೆ ಮಾತುಕತೆ ನಡೆಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಸೋಮವಾರ ತಿಳಿಸಿದ್ದಾರೆ. ಜಗತ್ತಿನ ಎಲ್ಲೇ ಆಗಲಿ ಕನ್ನಡಿಗರು ಸೇರಿದಂತೆ ಭಾರತೀಯರು ಸಂಕಷ್ಟಕ್ಕೆ ಸಿಲುಕಿದಾಗ ಕೇಂದ್ರ ಸರ್ಕಾರ ಸುರಕ್ಷಿತವಾಗಿ ಕರೆ ತಂದಿದೆ. ಹಿಂದೆ ಉಕ್ರೇನ್ ಅಲ್ಲಿ ಸಿಲುಕಿದ್ದವರನ್ನು ಮರಳಿ ಕರೆ ತಂದಿದ್ದೇವೆ. ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಗೆ ಕೇಂದ್ರ ಸರ್ಕಾರ ಪ್ರಥಮ ಆದ್ಯತೆ ನೀಡುತ್ತದೆ ಎಂದು ಜೋಶಿ ಹೇಳಿದ್ದಾರೆ.

ಇರಾನ್-ಇಸ್ರೇಲ್ ಯುದ್ಧದ ಭೀಕರತೆಯಿಂದಾಗಿ ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಮಾಹಿತಿಯಿದ್ದು, ಈ ಸಂಬಂಧ ಹಿರಿಯ ಸಚಿವರೊಂದಿಗೆ ತುರ್ತು ಚರ್ಚೆ ನಡೆಸಿದ್ದು, ಎಲ್ಲಾ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕನ್ನಡಿಗರಷ್ಟೇ ಅಲ್ಲ, ಯಾರೂ ಆತಂಕ ಪಡಬೇಕಿಲ್ಲ: ಪ್ರಲ್ಹಾದ್ ಜೋಶಿ

ಕನ್ನಡಿಗರು ಮಾತ್ರವಲ್ಲ ಭಾರತೀಯರನ್ನೆಲ್ಲ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸರ್ವ ಸನ್ನದ್ಧವಾಗಿದೆ. ಈಗಾಗಲೇ ರಾಯಭಾರಿ ಅಧಿಕಾರಿಗಳ ಜತೆ ಮಾತುಕತೆ ನಡೆಸಲಾಗಿದೆ. ಯಾರೊಬ್ಬರೂ ಆತಂಕ ಪಡಬೇಕಿಲ್ಲ ಎಂದು ಸಚಿವ ಪ್ರಹ್ಲಾದ ಜೋಶಿ, ಆತಂಕಿತ ಕುಟುಂಬಸ್ಥರಿಗೆ ಸ್ಥೈರ್ಯ ಹೇಳಿದ್ದಾರೆ.

ಯುದ್ಧಪೀಡಿತ ಪ್ರದೇಶಗಳಲ್ಲಿ ವಿಮಾನ ಸಂಚಾರ ಅಪಾಯಕಾರಿ ಆಗಿದ್ದು, ತಜ್ಞರ ಸಲಹೆ ಪಡೆಯಲಾಗುತ್ತಿದೆ. ಭಾರತೀಯರ ಸುರಕ್ಷತೆಯೇ ಸರ್ಕಾರದ ಮೊದಲ ಆದ್ಯತೆ ಎಂದಿರುವ ಸಚಿವರು, ವಿಧಾನಪರಿಷತ್ ಸದಸ್ಯ ಭೋಜೇಗೌಡರು ಸೇರಿದಂತೆ ಸಂಕಷ್ಟದಲ್ಲಿರುವ ಎಲ್ಲಾ ಕನ್ನಡಿಗರ ರಕ್ಷಣೆಗೆ ಶ್ರಮಿಸುತ್ತೇವೆಂದು ಜೋಶಿ ಹೇಳಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *