D.K ಶಿವಕುಮಾರ್ ಡಿನ್ನರ್ ಮೀಟಿಂಗ್: ನಾಯಕತ್ವ ಚರ್ಚೆ ಜೋರಾಗಿದೆ

D.K ಶಿವಕುಮಾರ್ ಡಿನ್ನರ್ ಮೀಟಿಂಗ್: ನಾಯಕತ್ವ ಚರ್ಚೆ ಜೋರಾಗಿದೆ

ಕಾಂಗ್ರೆಸ್ ಬಜೆಟ್ ಮಧ್ಯೆ ಡಿಸಿಎಂ ಕ್ರಮ ಸಂಚಲನ ಮೂಡಿಸಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ಕಾಂಗ್ರೆಸ್​​ನಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣದ ನಾಯಕರು ಸಭೆ ಮೇಲೆ ಸಭೆ ನಡೆಸುತ್ತಿದ್ದು, ತಮ್ಮ ತಮ್ಮ ನಾಯಕನ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅಲ್ಲದೇ ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ಹೈಕಮಾಂಡ್ ತೆರೆ ಎಳೆಯಬೇಕೆಂದು ಕೈ ನಾಯಕರು ಪಟ್ಟು ಹಿಡಿದಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್​ ಮೀಟಿಂಗ್ ಕರೆದಿದ್ದಾರೆ. ಹೌದು…ಇದೇ ಮಾರ್ಚ್ 10ರಂದು ಖಾಸಗಿ ಹೋಟೆಲ್​ನಲ್ಲಿ ಔತಣಕೂಟ ಆಯೋಜಿಸಿದ್ದಾರೆ. ಮಾರ್ಚ್ 6ಕ್ಕೆ ಡಿ.ಕೆ.ಶಿವಕುಮಾರ್​ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಳಿಸುತ್ತಿರುವುದರಿಂದ ಈ ಡಿನ್ನರ್ ಪಾರ್ಟಿ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಔತನಕೂಟದ ಮೂಲಜ ಶಾಸಕರು, ಪರಿಷತ್ ಸದಸ್ಯರು ಹಾಗೂ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಇದಾಗಿದೆ ಎಂದು ವಿಶ್ಷೇಷಿಸಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *