ಕಲಬುರ್ಗಿಯಲ್ಲಿ ಗಾಳಿ ಗುಣಮಟ್ಟ ಗಂಭೀರ ಹಂತಕ್ಕೆ ತಲುಪಿದೆ.

ಕಲಬುರ್ಗಿಯಲ್ಲಿ ಗಾಳಿ ಗುಣಮಟ್ಟ ಗಂಭೀರ ಹಂತಕ್ಕೆ ತಲುಪಿದೆ.

ರಾಜ್ಯದ ಹಲವು ನಗರಗಳಲ್ಲಿ AQI 150 ಮೀರಿದ ಆತಂಕ.

ಬೆಂಗಳೂರು : ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆಯ ಏರ್ ಕ್ವಾಲಿಟಿ ಹದಗೆಡುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 166ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿತ್ತು. ಆದರೆ ಇಂದು ಅದೇ ಉಡುಪಿ, ಮಂಗಳೂರು, ಕಲಬುರ್ಗಿ ಸೇರಿದಂತೆ ಹಲವೆಡೆಯ ವಾಯು ಗುಣಮಟ್ಟ 150ಕ್ಕಿಂತ ಹೆಚ್ಚಾಗಿದೆ. ಕಲಬುರ್ಗಿಯ AQI 195 ಇದ್ದು, 200ರ ಗಡಿ ತಲುಪುವ ಆತಂಕ ಎದುರಾಗಿದೆ. ಆದರೆ ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ

  • ಬೆಂಗಳೂರು –166
  • ಮಂಗಳೂರು-150
  • ಮೈಸೂರು –157
  • ಬೆಳಗಾವಿ – 158
  • ಕಲಬುರ್ಗಿ-195
  • ಶಿವಮೊಗ್ಗ – 153
  • ಬಳ್ಳಾರಿ – 163
  • ಹುಬ್ಬಳ್ಳಿ- 152
  • ಉಡುಪಿ –136
  • ವಿಜಯಪುರ –162

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *