ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ – ಶಿಕ್ಷಣ, ಸಾರಿಗೆ ಮತ್ತು ಮೂಲಸೌಕರ್ಯಕ್ಕೆ ದೊಡ್ಡ ಒತ್ತು
ರಾಜ್ಯದ ವಿವಿಧ ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ವರ್ಷ ಒಟ್ಟು 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಆರಂಭಿಸಲಾಗುತ್ತದೆ.
ಉದ್ಯೋಗ ನೇಮಕಾತಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಒಂದು ಬಾರಿ ಮಾತ್ರ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.
ಸಾರಿಗೆ ಇಲಾಖೆಗೆ 15,500 ಕೋಟಿ ರೂ. ತೆರಿಗೆ ಸಂಗ್ರಹಣೆ ಗುರಿ ನೀಡಲಾಗಿದೆ.ಇದರ ಜೊತೆಗೆ ನೊಂದಣಿ ಮತ್ತು ಮುದ್ರಾಂಕ ಇಲಾಖೆ: 29 ಸಾವಿರ ಕೋಟಿ ರೂ. ರಾಜಸ್ವ ಗುರಿ ಅಬಕಾರಿ ಇಲಾಖೆ: 45 ಸಾವಿರ ಕೋಟಿ ರೂ. ಆದಾಯ ಗುರಿ ಎಂದು ಸರ್ಕಾರ ನಿಗದಿ ಮಾಡಿದೆ.
2026–27ನೇ ಸಾಲಿನ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಾಗಿದೆ. ಮಕ್ಕಳ ವಿದ್ಯಾಭ್ಯಾಸವನ್ನು ಉತ್ತೇಜಿಸುವ ಉದ್ದೇಶದಿಂದ 800 ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ ಘೋಷಿಸಲಾಗಿದೆ.
60 ಕೋಟಿ ರೂ. ವೆಚ್ಚದಲ್ಲಿ 10 ಹೊಸ GTTC ಕೇಂದ್ರಗಳು ಸ್ಥಾಪಿಸಲಾಗುತ್ತವೆ. ಇದರಿಂದ ತಾಂತ್ರಿಕ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಗೆ ಉತ್ತೇಜನ ಸಿಗಲಿದೆ.ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ 62 ಹೊಸ ವಸತಿ ಶ್ರಮಿಕ ಶಾಲೆಗಳು ಆರಂಭಿಸಲಾಗುತ್ತವೆ. ಒಟ್ಟು 104 ಶಾಲೆಗಳ ಆರಂಭಕ್ಕೆ ಸರ್ಕಾರ ಆದ್ಯತೆ ನೀಡಲಿದೆ.
ಹುಬ್ಬಳ್ಳಿ-ಧಾರವಾಡ ನಗರದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ ಮಾಡಲಾಗುತ್ತದೆ.
ಪ್ಯಾರಾ ಮೆಡಿಕಲ್ ಕೋರ್ಸ್ ಆರಂಭ, ಕಾರ್ಮಿಕರ ವಿಮಾ ಸೊಸೈಟಿ ವತಿಯಿಂದ
- ಹುಬ್ಬಳ್ಳಿ
- ಇಂದಿರಾನಗರ
- ಮೈಸೂರು
- ದೊಡ್ಡಬಳ್ಳಾಪುರ
ಈ ನಗರಗಳಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್‌ಗಳು ಆರಂಭವಾಗಲಿವೆ.ಬೆಂಗಳೂರು ನಗರದ ರಸ್ತೆ ಅಭಿವೃದ್ಧಿಗೆ ಸರ್ಕಾರ ಮಹತ್ವದ ಘೋಷಣೆ ಮಾಡಿದೆ.1700 ಕೋಟಿ ರೂ. ಅನುದಾನದಲ್ಲಿ 158 ಕಿ.ಮೀ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳಲಾಗುತ್ತದೆ.ಈ ಯೋಜನೆಯಿಂದ ನಗರದಲ್ಲಿ ಗುಂಡಿ ರಸ್ತೆಗಳ ಸಮಸ್ಯೆ ಕಡಿಮೆಯಾಗಲಿದೆ ಹಾಗೂ ವಾಹನ ಸವಾರರಿಗೆ ಉತ್ತಮ ರಸ್ತೆ ಸೌಲಭ್ಯ ಸಿಗಲಿದೆ.
ಒಟ್ಟಿನಲ್ಲಿ, 2026–27 ಬಜೆಟ್‌ನಲ್ಲಿ ಉದ್ಯೋಗ, ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿರುವುದು ಗಮನಾರ್ಹವಾಗಿದೆ.
For More Updates Join our WhatsApp Group :




