ಗೃಹಲಕ್ಷ್ಮಿಗೆ 28,608 ಕೋಟಿ ಅನುದಾನ.
ರಾಜ್ಯದ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಈ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ನೆರವು ಮುಂದುವರಿಯಲಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು 12 ಹೊಸ ಪೊಲೀಸ್ ಠಾಣೆಗಳನ್ನು ಆರಂಭಿಸುವುದಾಗಿ ಸರ್ಕಾರ ಘೋಷಿಸಿದೆ. ಇದರಿಂದ ಸಾರ್ವಜನಿಕರ ಭದ್ರತೆ ಹೆಚ್ಚುವ ನಿರೀಕ್ಷೆ ಇದೆ.ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗಾಗಿ 100 ಜನ ಸಾಮರ್ಥ್ಯದ ಎರಡು ಮಹಿಳಾ ವೃದ್ಧಾಶ್ರಮಗಳನ್ನು ಆರಂಭಿಸಲಾಗುತ್ತದೆ.ಅಲ್ಪಸಂಖ್ಯಾತ ಸಮುದಾಯದ 5000 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಗೆ ತಲಾ 50 ಸಾವಿರ ರೂ. ಸಹಾಯಧನ ನೀಡಲು ಸರ್ಕಾರ ನಿರ್ಧರಿಸಿದೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಸಮಸ್ಯೆಯನ್ನು ನಿಯಂತ್ರಿಸಲು ಸರ್ಕಾರ ಕ್ರಮ ಕೈಗೊಂಡಿದೆ.ಬೆಂಗಳೂರು ಮತ್ತು ಬೀದರ್‌ನಲ್ಲಿ ಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.
ಬೆಂಗಳೂರು ನಗರದಲ್ಲಿ ಸ್ತನ ಮತ್ತು ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪಿಸಲಾಗುತ್ತದೆ.ರಾಯಚೂರು,ಬಾಗಲಕೋಟೆ,ವಿಜಯಪುರ,ಬೀದರ್,ಕೊಪ್ಪಳ,ಚಿತ್ರದುರ್ಗ,ಮಂಡ್ಯ,ಭದ್ರಾವತಿ, ಕೆಜಿಎಫ್ ಈ ಸ್ಥಳಗಳ ESI ಆಸ್ಪತ್ರೆಗಳನ್ನು ಉನ್ನತೀಕರಿಸಲಾಗುತ್ತದೆ.
ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಘೋಷಿಸಲಾಗಿದೆ.
- ಮಿಲೆಟ್ ಹಬ್ ನಿರ್ಮಾಣ – ಸಿರಿಧಾನ್ಯ ಉತ್ಪನ್ನಗಳ ಉತ್ತೇಜನಕ್ಕೆ
- 100 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ
- ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ
- ಮುಂದಿನ 3 ವರ್ಷಗಳಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ
- AI ಆಧಾರಿತ ರೈತ ಕರೆ ಕೇಂದ್ರ ಸ್ಥಾಪನೆ
ಇದಲ್ಲದೆ ಚಿತ್ರದುರ್ಗದಲ್ಲಿ ಕೃಷಿ ಉದ್ದಿಮೆ ತರಬೇತಿ ಕೇಂದ್ರವನ್ನು ಉನ್ನತೀಕರಿಸಲಾಗುತ್ತದೆ.
ಮಕ್ಕಳ ಹಿತರಕ್ಷಣೆ ದೃಷ್ಟಿಯಿಂದ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸುವ ನಿರ್ಧಾರ ಸರ್ಕಾರ ಕೈಗೊಂಡಿದೆ.ಬೆಂಗಳೂರು ನಗರದ ಟ್ರಾಫಿಕ್ ಹಾಗೂ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಮೈಸೂರನ್ನು ರಾಜ್ಯದ ಎರಡನೇ ಐಟಿ ಸಿಟಿಯಾಗಿ ಅಭಿವೃದ್ಧಿಪಡಿಸಲು ಸರ್ಕಾರ ತೀರ್ಮಾನಿಸಿದೆ.2026–27 ಬಜೆಟ್‌ನಲ್ಲಿ ಮಹಿಳಾ ಸಬಲೀಕರಣ, ಆರೋಗ್ಯ, ಕೃಷಿ ಅಭಿವೃದ್ಧಿ ಹಾಗೂ ನಗರಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿರುವುದು ಸ್ಪಷ್ಟವಾಗಿದೆ.
For More Updates Join our WhatsApp Group :




