CM ಸಿದ್ದರಾಮಯ್ಯರಿಂದ ದಾಖಲೆಯ 17ನೇ ಬಜೆಟ್ – ಗ್ಯಾರಂಟಿ ಯೋಜನೆಗಳಿಗೆ ಭರ್ಜರಿ ಅನುದಾನ

CM ಸಿದ್ದರಾಮಯ್ಯರಿಂದ ದಾಖಲೆಯ 17ನೇ ಬಜೆಟ್ – ಗ್ಯಾರಂಟಿ ಯೋಜನೆಗಳಿಗೆ ಭರ್ಜರಿ ಅನುದಾನ

ಕರ್ನಾಟಕ ಬಜೆಟ್ 2026–27 ಮಂಡನೆ: ಪಿಡಿಎಫ್ ಪ್ರತಿ ಡೌನ್‌ಲೋಡ್‌ಗೆ ಲಭ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ 2026-27 ನೇ ಸಾಲಿನ ಬಜೆಟ್ ಮಂಡನೆಯಾಗಿದೆ. ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ, ಅತಿಹೆಚ್ಚು ಆಯವ್ಯಯ ಮಂಡಿಸಿದ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡರು. ಅವರು 2026ರವರೆಗೆ 17 ಬಜೆಟ್ ಮಂಡನೆ ಮಾಡಿದಂತಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಮ್​ಗಳಿಗೆ ಅನುದಾನ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸೇರಿದಂತೆ ಅನೇಕ ಘೋಷಣೆಗಳನ್ನು ಬಜೆಟ್​​ನಲ್ಲಿ ಮಾಡಲಾಗಿದೆ.

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗೆ ಬಜೆಟ್​ನಲ್ಲಿ ಭರ್ಜರಿ ಅನುದಾನ ಹಂಚಿಕೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಅನುದಾನ ಮೀಸಲು, ಶಕ್ತಿ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನ ಮೀಸಲು, ಗೃಹಜ್ಯೋತಿ ಯೋಜನೆಗೆ ಈ ವರ್ಷ 10,578 ಹಣ ಮೀಸಲು ಇಡಲಾಗಿದೆ.

ಸದ್ಯ ಈ ಬಜೆಟ್ ಮಂಡನೆಯೊಂದಿಗೆ ಕರ್ನಾಟಕದ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಕೀರ್ತಿ ಸಿದ್ದರಾಮಯ್ಯ ಅವರದ್ದಾಗಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ 13 ಬಾರಿ ಹಾಗೂ ಬಿಎಸ್ ಯಡಿಯೂರಪ್ಪ 8 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *