ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು.!

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು.!

ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು! ಹನಿಟ್ರ್ಯಾಪ್ ಮಾಡುತ್ತಿದ್ದ ಕತರ್ನಾಕ್ ಲೇಡಿ ಅರೆಸ್ಟ್

ಬೆಳಗಾವಿ: ಶ್ರೀಮಂತ ವ್ಯಕ್ತಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಬಲೆಗೆ ಬೀಳಿಸಿ ಮೋಸ ಮಾಡುತ್ತಿದ್ದ  ಮಹಿಳೆಯನ್ನು ಬೆಳಗಾವಿ ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಶ್ರೀಮಂತರನ್ನೇ ಟಾರ್ಗೆಟ್ ಮಾಡಿ ಫೇಸ್​ಬುಕ್ ಮೂಲಕ ಪರಿಚಯ ಮಾಡಿಕೊಳ್ಳುತ್ತಿದ್ದ ಆಕೆ, ಲಾಡ್ಜ್​ಗೆ ಕರೆಸಿ ಅವರ ಹಣ, ಚಿನ್ನ ಸೇರಿ ಅಮೂಲ್ಯ ವಸ್ತುಗಳನ್ನೆಲ್ಲಾ ದೋಚುತ್ತಿದ್ದಳು ಎಂದು ತಿಳಿದುಬಂದಿದೆ. ಮೋಸ ಹೋಗಿದ್ದ ವ್ಯಕ್ತಿಯೊಬ್ಬರು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಫೇಸ್​ಬುಕ್, ಇನ್ಸ್ಟಾಗ್ರಾಂ ಮೂಲಕ ಶ್ರೀಮಂತರಿಗೆ ಬಲೆ

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದವಳಾದ ದೀಪಾ ದೀಪಾ ಅವಟಗಿ (33) ಫ್ಯಾಶನ್ ಡಿಸೈನರ್​ ಆಗಿದ್ದು, ಹನಿಟ್ರ್ಯಾಪ್ ಪ್ರಕರಣದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಹಣದಾಸೆಗೆ ಬಿದ್ದಿದ್ದ ದೀಪಾ, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂ ಮೂಲಕ ಶ್ರೀಮಂತ ವ್ಯಕ್ತಿಗಳೊಂದಿಗೆ ಪರಿಚಯ ಮಾಡಿಕೊಳ್ಳುತ್ತಿದ್ದಳು. ನಂತರ ಅವರ ನಂಬರ್ ತೆಗೆದುಕೊಂಡು ಮೆಸೇಜ್ ಮಾಡಿ ಲಾಡ್ಜ್‌ಗೆ ಕರೆಸಿಕೊಳ್ಳುತ್ತಿದ್ದಳು. ಈಕೆಯನ್ನು ನಂಬಿ ಅಲ್ಲಿಗೆ ಬಂದ ಗಂಡಸರ ಬಳಿ ಸಲುಗೆಯಿಂದ ವರ್ತಿಸಿ, ಅವರನ್ನು ಮೊದಲು ಸ್ನಾನಕ್ಕೆ ಕಳುಹಿಸುತ್ತಿದ್ದಳು. ಇದೇ ಸಮಯ ಸಾಧಿಸಿ ವ್ಯಕ್ತಿಗಳ ಬಳಿಯಿದ್ದ ಹಣ, ಚಿನ್ನ, ಬ್ಯಾಗ್ ಹಾಗೂ ಕಾರುಗಳನ್ನು ತೆಗೆದುಕೊಂಡು ಪರಾರಿಯಾಗುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ದೋಚಿದ್ದೇನೇನು?

ಬಂಧನದ ನಂತರ ಆರೋಪಿಯಿಂದ ಸುಮಾರು 32 ಲಕ್ಷ 86 ಸಾವಿರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಂದು ಫಾರ್ಚೂನರ್ ಕಾರು, ಒಂದು ಮಾರುತಿ ಸುಜುಕಿ ಎಸ್-ಕ್ರಾಸ್ ಕಾರು, 11 ಮೊಬೈಲ್ ಫೋನ್‌ಗಳು, ಒಂದು ಟ್ಯಾಬ್, ಒಂದು ಡೊಂಗಲ್, ಮೂರು ಕಾರಿನ ಕೀಗಳು ಹಾಗೂ 14 ಸಾವಿರ ರೂಪಾಯಿ ನಗದು ಸೇರಿದಂತೆ ಹಲವು ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *