ಮಹಿಳಾ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಪ್ರಧಾನಿಗೆ ಪತ್ರ: ತುರ್ತು ಪರಿಹಾರ ಬೇಕು
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಕೊರತೆ ತೀವ್ರವಾಗಿರುವ ಹಿನ್ನೆಲೆ ಮಹಿಳಾ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಗೆ ತುರ್ತು ಪರಿಹಾರ ಒದಗಿಸುವಂತೆ ಬೆಂಗಳೂರಿನ ಗಾಂಧಿನಗರದಲ್ಲಿರುವ ‘ರಸಪಾಕ’ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲೇನಿದೆ?
ಕರ್ನಾಟಕದ ನಾರಿ ಶಕ್ತಿ ಪರವಾಗಿ ಪತ್ರ ಬರೆದಿರುವ ರೂಪಾ ಶಾಸ್ತ್ರಿ, ಕಳೆದ ಕೆಲವು ವಾರಗಳಿಂದ ವಾಣಿಜ್ಯ ಅಡುಗೆ ಅನಿಲದ ತೀವ್ರ ಕೊರತೆ ಮತ್ತು ಬೆಲೆ ಏರಿಕೆಯು ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ ಎಂದು ತಿಳಿಸಿದ್ದಾರೆ. ಸಿಲಿಂಡರ್ ಪೂರೈಕೆಯಲ್ಲಿ ಶೇ50ಕ್ಕೂ ಹೆಚ್ಚು ಕಡಿತವಾಗಿರುವುದರಿಂದ ಹೋಟೆಲ್ಗಳನ್ನು ನಡೆಸುವುದು ಕಷ್ಟವಾಗುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಸಣ್ಣ ಹೋಟೆಲ್ಗಳಿಗೆ ಸಬ್ಸಿಡಿ ಅಥವಾ ಆರ್ಥಿಕ ಪ್ಯಾಕೇಜ್ ಘೋಷಿಸಿ
ಇದರ ಜೊತೆಗೆ ಸಿಲಿಂಡರ್ ಬೆಲೆ ಏರಿಕೆಯ ಪರಿಣಾಮ ಮಹಿಳಾ ಉದ್ಯಮಿಗಳ ಅಲ್ಪ ಲಾಭಾಂಶ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಈ ಉದ್ಯಮವನ್ನು ನಂಬಿ ಬದುಕುತ್ತಿರುವ ಸಾವಿರಾರು ಮಹಿಳಾ ಕಾರ್ಮಿಕರ ಜೀವನೋಪಾಯಕ್ಕೂ ಹೊಡೆತ ಬಿದ್ದಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಹೀಗಾಗಿ ಕರ್ನಾಟಕದ ಹೋಟೆಲ್ ಉದ್ಯಮಕ್ಕೆ ವಾಣಿಜ್ಯ ಎಲ್ಪಿಜಿ ಪೂರೈಕೆಯನ್ನು ತಕ್ಷಣ ಸುಗಮಗೊಳಿಸಬೇಕು. ಮಹಿಳಾ ಉದ್ಯಮಿಗಳು ನಡೆಸುವ ಹೋಟೆಲ್ಗಳಿಗೆ ಗ್ಯಾಸ್ ಹಂಚಿಕೆಯಲ್ಲಿ ವಿಶೇಷ ಆದ್ಯತೆ ನೀಡಬೇಕು ಹಾಗೂ ಸಣ್ಣ ಹೋಟೆಲ್ಗಳಿಗೆ ಸಬ್ಸಿಡಿ ಅಥವಾ ಆರ್ಥಿಕ ಪ್ಯಾಕೇಜ್ ಘೋಷಿಸಬೇಕೆಂದು ಅವರು ಪ್ರಧಾನಿಗೆ ಮನವಿ ಮಾಡಿದ್ದಾರೆ.
For More Updates Join our WhatsApp Group :




