ಕೆಲವು ತರಕಾರಿಗಳ ಜೊತೆ ತಿಂದರೆ ಆರೋಗ್ಯಕ್ಕೆ ಹಾನಿ ಸಾಧ್ಯ
ತರಕಾರಿ ಸೇವನೆ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ ನಿಜ. ಆದರೆ ಕೆಲವು ತರಕಾರಿಗಳನ್ನು ಬೇರೆ ಕೆಲವೊಂದಿಷ್ಟು ತರಕಾರಿಯೊಂದಿಗೆ ಸೇವಿಸಿದರೆ ಅದು ಪ್ರಯೋಜನಕಾರಿಯಾಗುವ ಬದಲು ಆರೋಗ್ಯದ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಅಂತಹ ತರಾರಿಗಳಲ್ಲಿ ಬೆಂಡೆಕಾಯಿ ಕೂಡ ಒಂದು. ಬೇಸಿಗೆಯಲ್ಲಿ ಹೇರಳವಾಗಿ ಲಭ್ಯವಿರುವ ಬೆಂಡೆಕಾಯಿ ಫೈಬರ್, ವಿಟಮಿನ್ ಸಿ, ವಿಟಮಿನ್ ಕೆ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ತರಕಾರಿಯಾಗಿದ್ದು, ಇದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಆದ್ರೆ ಈ ಬೆಂಡೆಕಾಯಿ ಜೊತೆಗೆ ಈ ಒಂದಷ್ಟು ತರಕಾರಿಗಳನ್ನು ಸೇವಿಸಿದರೆ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾದ್ರೆ ಆರೋಗ್ಯದ ದೃಷ್ಟಿಯಿಂದ ಬೆಂಡೆಕಾಯಿ ಜೊತೆ ಯಾವ ತರಕಾರಿಗಳನ್ನು ಸೇವನೆ ಮಾಡಬಾರದು ಎಂಬುದನ್ನು ನೋಡೋಣ.
ಬೆಂಡೆಕಾಯಿ ಜೊತೆಗೆ ಈ ತರಕಾರಿಗಳನ್ನು ತಿನ್ನಲೇಬೇಡಿ:
ಆಲೂಗಡ್ಡೆ: ಆಲೂಗಡ್ಡೆ ಮತ್ತು ಬೆಂಡೆಕಾಯಿಯನ್ನು ಒಟ್ಟಿಗೆ ಸೇವಿಸಬಾರದು. ಏಕೆಂದರೆ ಬೆಂಡೆಕಾಯಿಯಲ್ಲಿ ಫೈಬರ್ ಅಧಿಕವಾಗಿದ್ದರೆ, ಆಲೂಗಡ್ಡೆಯಲ್ಲಿ ಕಾರ್ಬೋಹೈಡ್ರೇಟ್‌ಗಳು ಅಧಿಕವಾಗಿರುತ್ತವೆ. ಅವುಗಳನ್ನು ಒಟ್ಟಿಗೆ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆಯ ಅಸಮತೋಲನ ಉಂಟಾಗುತ್ತದೆ ಮತ್ತು ಬೊಜ್ಜು ಉಂಟಾಗುತ್ತದೆ. ಆದ್ದರಿಂದ, ಅವುಗಳನ್ನು ಒಟ್ಟಿಗೆ ಸೇವಿಸುವುದನ್ನು ತಪ್ಪಿಸಿ.
ಬದನೆಕಾಯಿ: ಬದನೆಕಾಯಿಯು ದೇಹದಲ್ಲಿ ಕಬ್ಬಿಣದ ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುವ ಕೆಲವು ಸಂಯುಕ್ತಗಳನ್ನು ಹೊಂದಿರುತ್ತದೆ, ಕೆಲವು ಅಲರ್ಜಿಕ್ ಅಂಶಗಳನ್ನು ಹೊಂದಿರುತ್ತದೆ ಮತ್ತು ಬೆಂಡೆಕಾಯಿ ಜಿಗುಟಾದ ರಚನೆಯನ್ನು ಹೊಂದಿರುತ್ತದೆ. ಹಾಗಾಗಿ ಇವುಗಳನ್ನು ಒಟ್ಟಾಗಿ ಸೇವನೆ ಮಾಡಿದರೆ ಇದು ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತವೆ. ಚರ್ಮದ ಅಲರ್ಜಿ ಉಂಟಾಗುತ್ತದೆ.
ಮೂಲಂಗಿ: ಮೂಲಂಗಿಯಲ್ಲಿ ಸಲ್ಫರ್ ಸಂಯುಕ್ತಗಳಿದ್ದು ಅದು ಹೊಟ್ಟೆಯಲ್ಲಿ ಅನಿಲವನ್ನು ಹೆಚ್ಚಿಸುತ್ತದೆ. ಬೆಂಡೆಕಾಯಿ ಮತ್ತು ಮೂಲಂಗಿ ಎರಡೂ ವಿಭಿನ್ನ ಸ್ವಭಾವದ ತರಕಾರಿಗಳು. ಅವುಗಳನ್ನು ಒಟ್ಟಿಗೆ ತಿನ್ನುವುದರಿಂದ ಗ್ಯಾಸ್, ಆಮ್ಲೀಯತೆ ಮತ್ತು ಚರ್ಮದ ಅಲರ್ಜಿ ಉಂಟಾಗುತ್ತದೆ.
ಹಾಗಲಕಾಯಿ: ಹಾಗಲಕಾಯಿ ಮತ್ತು ಬೆಂಡೆಕಾಯಿಯನ್ನು ಒಟ್ಟಿಗೆ ಸೇವಿಸುವುದನ್ನು ಸಹ ತಪ್ಪಿಸಬೇಕು. ಈ ಎರಡೂ ವಸ್ತುಗಳು ಜೀರ್ಣವಾಗಲು ಸಮಯ ತೆಗೆದುಕೊಳ್ಳುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಈಗಾಗಲೇ ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿದ್ದರೆ, ಬೆಂಡೆಕಾಯಿ ಮತ್ತು ಹಾಗಲಕಾಯಿಯನ್ನು ಒಟ್ಟಿಗೆ ತಿನ್ನಬಾರದು. ಇದು ಆಮ್ಲೀಯತೆ, ಹೊಟ್ಟೆಯ ಕಿರಿಕಿರಿ, ನಿರ್ಜಲೀಕರಣ ಮತ್ತು ತಲೆನೋವಿನಂತಹ ಸಮಸ್ಯೆಗಳನ್ನು ಉಂಟುಮಾಡುತ್ತದೆ.
For More Updates Join our WhatsApp Group :



