ಕೆಡಿ ಚಿತ್ರದ ಹಾಡಿಗೆ ಭಾರೀ ಟೀಕೆ – ಕೆಲ ಹೊತ್ತು ಮಾಯವಾಗಿ ಮತ್ತೆ ಯೂಟ್ಯೂಬ್ನಲ್ಲಿ ಕಾಣಿಸಿಕೊಂಡ ಹಾಡು
ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾ ಈಗ ಸುದ್ದಿ ಆಗಿದೆ. ಇದಕ್ಕೆ ಕಾರಣ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು. ಈ ಹಾಡಿನಲ್ಲಿ ನೋರಾ ಫತೇಹಿ ಹಾಗೂ ಸಂಜಯ್ ದತ್ ನಟಿಸಿದ್ದರು. ಈ ಹಾಡಿಗೆ ಸಾಕಷ್ಟು ವಿರೋಧ ವ್ಯಕ್ತವಾಯಿತು. ಅನೇಕ ಸೆಲೆಬ್ರಿಟಿಗಳು ಈ ಹಾಡಿನ ಸಾಹಿತ್ಯವನ್ನು ಟೀಕಿಸಿದರು. ಈ ಬೆನ್ನಲ್ಲೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ಮೂಲಕ ತೆಗೆದುಹಾಕಲಾಗಿದೆ ಎನ್ನಲಾಗಿತ್ತು. ಆದರೆ, ಇದು ನಿಜವಲ್ಲ.
ಪ್ರೇಮ್ ಅವರು ‘ಕೆಡಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಏಪ್ರಿಲ್ 30ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಹಾಡಿಗೆ ರಾಜ್ಯದ ಜನತೆ ಮಾತ್ರವಲ್ಲ ಬಾಲಿವುಡ್ ಮಂದಿಯೂ ಕ್ಯಾತೆ ತೆಗೆದಿದ್ದರು. ಅರ್ಜುನ್ ಜನ್ಯ ಸಂಗೀತ ಸಂಯೋಜನೆಯ ಈ ಚಿತ್ರದ ಹಾಡಿಗೆ ಪ್ರೇಮ್ ಸಾಹಿತ್ಯ ಬರೆದಿದ್ದಾರೆ. ಐಶ್ವರ್ಯಾ ರಂಗರಾಜನ್ ಕನ್ನಡದಲ್ಲಿ ಹಾಡಿದ್ದಾರೆ. ಹಿಂದಿಯಲ್ಲಿ ರಖೀಬ್ ಆಲಂ ಅವರು ಸಾಹಿತ್ಯ ಬರೆದಿದ್ದು, ಮಂಗ್ಲಿ ಧ್ವನಿ ನೀಡಿದ್ದಾರೆ.
ಪ್ರೇಮ್ ಅವರು ಈ ಮೊದಲು ಈ ರೀತಿಯ ಸಾಕಷ್ಟು ವಿವಾದಗಳನ್ನು ಮಾಡಿಕೊಂಡಿದ್ದರು. ಅವರ ನಟನೆಯ ‘ಪ್ರೇಮ್ ಅಡ್ಡ’ ಸಿನಿಮಾ 2012ರಲ್ಲಿ ರಿಲೀಸ್ ಆಯಿತು. ಈ ಚಿತ್ರದ ‘ಮೇಲುಕೋಟೆ ಹುಡುಗಿ ಒಬ್ಬಳು’ ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಅದರಲ್ಲಿರೋ ಲಿರಿಕ್ಸ್ಗೆ ಮೇಲುಕೋಟೆಯ ಜನರು ವಿರೋಧ ಹೊರಹಾಕಿದ್ದರು.
For More Updates Join our WhatsApp Group :



