ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ.

ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ.

ಗ್ಯಾರಂಟಿಗಳಿಂದ ಮಹಿಳೆಯರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಿದೆ.

ಬೆಂಗಳೂರು, : ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.

ಅವರು ಇಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ  ಆಯೋಜಿಸಲಾಗಿದ್ದ ಕಾರ್ಯಕಾರಿ ಸಭೆ ಮತ್ತು ತರಬೇತಿ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.

2013 ರಿಂದ 2018 ಮತ್ತು 2023ರಿಂದ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಪ್ರಮುಖ ಗ್ಯಾರಂಟಿಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆಯಿಂದ ಇದುವರೆಗೆ ಮಹಿಳೆಯರು 700  ಕೋಟಿ ಪ್ರಯಾಣಗಳನ್ನು ಕೈಗೊಂಡಿದ್ದಾರೆ. ಮಹಿಳಾ ಕೇಂದ್ರಿತ ಯೋಜನೆಗಳಿಂದ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲಾಗಿದೆ. ಸರ್ಕಾರದ ಗ್ಯಾರಂಟಿಗಳಿಂದ ಮಹಿಳೆಯರ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 1.26 ಕೋಟಿ ಮಹಿಳೆಯರಿಗೆ ಮಾಸಿಕ 2000 ರೂಗಳನ್ನು ನೀಡಲಾಗುತ್ತಿದ್ದು, ಇದರಿಂದ ಮಹಿಳೆಯರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿ ಸುಧಾರಿಸಿದೆ. ಆರ್ಥಿಕ ಸ್ವಾತಂತ್ರ್ಯದಿಂದ ಮಹಿಳೆಯರ ಆತ್ಮವಿಶ್ವಾಸ ಹೆಚ್ಚಿದೆ. ಡಾ.ಬಿ.ಆರ್. ಅಂಬೇಡ್ಕರ್ ಅವರು ಸಮಾಜದಲ್ಲಿ ಲಿಂಗತಾರತಮ್ಯ ಮತ್ತು ಅಸಮಾನತೆ ನಿವಾರಣೆಯಾಗದೇ ಸ್ವಾತಂತ್ರ್ಯ ಸಾರ್ಥಕತೆ ಹೊಂದುತ್ತದೆ ಎಂದರು.

*ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ*

ಮಹಿಳೆಯರಲ್ಲಿ ನಾಯಕತ್ವದ ಗುಣ ಬಹಳ ಪ್ರಮುಖವಾಗಿದೆ. ಎಲ್ಲರಿಗೂ ಸಮಾನ ಅವಕಾಶ ದೊರೆತರೆ ಸಮಾನತೆಯನ್ನು ಸಾಧಿಸುವುದು ಸುಲಭವಾಗಿದೆ.  ಕರ್ನಾಟಕ ಪ್ರದೇಸ ಮಹಿಳಾ ಕಾಂಗ್ರೆಸ್ ನಲ್ಲಿ 1 ಲಕ್ಷಕ್ಕೂ ಹೆಚ್ಚು ಮಹಿಳಾ ಸದಸ್ಯರು ಇದ್ದು, ಭವಿಷ್ಯದಲ್ಲಿ  ಈ ಸಂಖ್ಯೆ 2 ಲಕ್ಷಗಳಿಗೆ ವೃದ್ಧಿಸಬೇಕು. ಉಪಚುನಾವಣೆ ಸಮೀಸುತ್ತಿರುವುದರಿಂದ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಮಹಿಳಾ ಸದಸ್ಯರ ಪಾತ್ರ ಮಹತ್ವದ್ದಾಗಿದೆ. ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯಲ್ಲಿ  ಮಹಿಳಾ ಸದಸ್ಯರ ಎರಡು ತಂಡಗಳನ್ನು ರಚಿಸಿ , ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು  ಸೂಚಿಸಿದರು. ಕಳೆದ ಬಾರಿ ಚೆನ್ನಪಟ್ಟಣ, ಶಿಗ್ಗಾಂವ , ಸಂಡೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ  ಜಯಭೇರಿ ಬಾರಿಸಿತ್ತು. ಈ ಬಾರಿಯೂ ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್  ಪಕ್ಷ ಗೆಲ್ಲಲೇಬೇಕಿದ್ದು , ಇದಕ್ಕಾಗಿ ಅಗತ್ಯ ಸಿದ್ದತೆಗಳನ್ನು ಕಾಂಗ್ರೆಸ್ ಪಕ್ಷ ಮಾಡಿಕೊಂಡಿದೆ ಎಂದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *