ಬೆಂಗಳೂರು ಹವಾಮಾನ ಸ್ಥಿತಿ.

ಬೆಂಗಳೂರು ಹವಾಮಾನ ಸ್ಥಿತಿ.

ಗರಿಷ್ಠ 32°C, ಕನಿಷ್ಠ 19°C; ಸಂಜೆ ಮಳೆ ಸಾಧ್ಯತೆ.

ಬೆಂಗಳೂರು : ಕರ್ನಾಟಕದಾದ್ಯಂತ ಇಂದು ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಗರಿಷ್ಠ ತಾಪಮಾನವು 33°C ಮತ್ತು ಕನಿಷ್ಠ ತಾಪಮಾನವು 21°C ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ 32°C ಮತ್ತು ಕನಿಷ್ಠ 19°C ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಹಗಲಿನಲ್ಲಿ ಹಗುರ ಮಳೆಯ ಮುನ್ಸೂಚನೆ ಇದ್ದು, ರಾತ್ರಿಯ ವೇಳೆ ಆಕಾಶವು ತಿಳಿಯಾಗಿರಲಿದೆ. ಇನ್ನು ನಗರದ ಕೆಲವು ಭಾಗಗಳಲ್ಲಿ ಸಾಯಂಕಾಲ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ (ಬೀದರ್, ಕಲಬುರಗಿ, ರಾಯಚೂರು ಇತ್ಯಾದಿ) ತೀವ್ರ ಬಿಸಿಲಿನ ನಡುವೆಯೂ ಗುಡುಗು ಸಹಿತ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನವು 37°C ಆಸುಪಾಸಿನಲ್ಲಿರಬಹುದು. ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಂಭವವಿದೆ. ಇನ್ನು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಮಳೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮಲೆನಾಡು ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು, ತಾಪಮಾನವು ಇತರ ಜಿಲ್ಲೆಗಳಿಗಿಂತ ಕಡಿಮೆ ಇರಲಿದೆ. ಹಾವೇರಿ ಮತ್ತು ಚಿತ್ರದುರ್ಗ ಭಾಗಗಳಲ್ಲಿ ಹಗಲು ಬಿಸಿಲು ತೀವ್ರವಾಗಿರಲಿದ್ದು, ಸಂಜೆಯ ಹೊತ್ತಿಗೆ ಆಕಾಶ ಮೋಡದಿಂದ ಕೂಡಿರುತ್ತದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *