ಶರತ್, ಕಿರಣ್ ಮತ್ತು ಪುಟ್ಟರಾಜು ವಿರುದ್ಧದ ಆರೋಪ ತಪ್ಪು ಸಾಬೀತು
ಹಾಸನ : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಮತ್ತು ಸಂಸದ ಶ್ರೇಯಸ್ ಪಟೇಲ್ ಅವರ ಆಪ್ತರಿಗೆ ದೊಡ್ಡ ಮಟ್ಟದ ರಿಲೀಫ್ ಸಿಕ್ಕಿದೆ. ಪ್ರೀತಂ ಗೌಡ ಆಪ್ತರಾದ ಶರತ್ ಮತ್ತು ಕಿರಣ್, ಹಾಗೆಯೇ ಶ್ರೇಯಸ್ ಪಟೇಲ್ ಆಪ್ತರಾಗಿರುವ ಪುಟ್ಟರಾಜು ಅವರಿಗೆ ಆರೋಪಗಳಿಂದ ಮುಕ್ತಿ ದೊರೆತಿದೆ.
ವಿಶೇಷ ತನಿಖಾ ತಂಡ (SIT) ಈ ಮೂವರ ಹೆಸರುಗಳನ್ನು ತಮ್ಮ ದೋಷಾರೋಪ ಪಟ್ಟಿಯಿಂದ ಕೈಬಿಟ್ಟಿದೆ. ಪ್ರಾಥಮಿಕ ಆರೋಪಗಳ ಪ್ರಕಾರ, ಶರತ್, ಕಿರಣ್ ಮತ್ತು ಪುಟ್ಟರಾಜು ಅವರು ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ಪೆನ್ ಡ್ರೈವ್ ವೀಡಿಯೋಗಳ ಹಂಚಿಕೆಯಲ್ಲಿ ಮತ್ತು ಅವುಗಳನ್ನು ದೊಡ್ಡ ಮಟ್ಟದಲ್ಲಿ ವೈರಲ್ ಮಾಡುವಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿತ್ತು. ಆದರೆ, ಎಸ್ಐಟಿ ನಡೆಸಿದ ತನಿಖೆಯಲ್ಲಿ ಇವರು ಕೃತ್ಯದಲ್ಲಿ ಭಾಗಿಯಾಗಿಲ್ಲ ಎಂಬುದು ದೃಢಪಟ್ಟಿದೆ. ಹಾಸನದ ಸಿವಿಲ್ ನ್ಯಾಯಾಲಯಕ್ಕೆ ಸಲ್ಲಿಕೆಯಾದ 13,712 ಪುಟಗಳ ಚಾರ್ಜ್ ಶೀಟ್ನಲ್ಲಿ ಈ ಮೂವರ ಹೆಸರುಗಳನ್ನು ಸೇರಿಸಲಾಗಿಲ್ಲ. ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಇವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ.
For More Updates Join our WhatsApp Group :




