ಬೋನಿಗೆ ಬಿದ್ದ ಚಿರತೆ ನೋಡಲು ಮುಗಿಬಿದ್ದ ಜನ
ಮಂಡ್ಯ : ಮಂಡ್ಯ ಜಿಲ್ಲೆಯಾದ್ಯಂತ ಚಿರತೆ ಹಾವಳಿ ಹೆಚ್ಚಾಗಿದ್ದು, ಅದರಲ್ಲೂ ಮಂಡ್ಯ ಹೊರವಲಯದ ಭೂತನ ಹೊಸೂರು ಗ್ರಾಮದಲ್ಲಿ ಜನರಲ್ಲಿ ಆತಂಕ ಮನೆ ಮಾಡಿತ್ತು. ಕಬ್ಬಿನ ಗದ್ದೆಯಲ್ಲಿ ಇತ್ತೀಚೆಗೆ ಮೂರು ಚಿರತೆ ಮರಿಗಳು ಕಾಣಿಸಿದ ನಂತರ, ತಾಯಿ ಚಿರತೆಯ ಹಾವಳಿ ಹೆಚ್ಚಾಗಿತ್ತು. ಇದರಿಂದ ಗ್ರಾಮಸ್ಥರಿಗೆ ಜಮೀನುಗಳಿಗೆ ಹೋಗಲು ಭಯ ಕಾಡುತ್ತಿತ್ತು, ಅಲ್ಲದೆ ಸಾಕುಪ್ರಾಣಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿತ್ತು.
ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಳೆದ ಎರಡು ದಿನಗಳಿಂದ ಬೋನು ಇರಿಸಿದ್ದರು. ಈಗ ಮರಿಗಳನ್ನು ಹುಡುಕಿಕೊಂಡು ಬಂದ ತಾಯಿ ಚಿರತೆ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯ ಸ್ಥಳಾಂತರಕ್ಕೆ ಕ್ರಮ ಕೈಗೊಂಡಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆಯಿಂದ ಭೂತನ ಹೊಸೂರು ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಮತ್ತು ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ಬೋನಿಗೆ ಬಿದ್ದ ಚಿರತೆ ನೋಡಲು ನೂರಾರು ಸಂಖ್ಯೆಯಲ್ಲಿ ಜನ ಆಗಿಸಿದ್ದು ಕಂಡುಬಂತು.
For More Updates Join our WhatsApp Group :




