ಮಹಿಳೆ ಇರಿದು ಕೊಂದವ ಜೈಲು ಪಾಲು.
ಬೆಂಗಳೂರು : ಗಂಗೊಂಡನಹಳ್ಳಿಯಲ್ಲಿ ಇಬ್ಬರು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕನೋರ್ವ ಆಕೆಯನ್ನು ಡ್ಯಾಗರ್ನಿಂದ ಇರಿದು ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಆರೋಪಿ ಹಫೀಜ್ನ ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಸಂಜೆ ಫೀರ್ದೋಸ್ ಬಾನು ಎಂಬಾಕೆಯನ್ನು ಈತ ಹತ್ಯೆಗೈದಿದ್ದು, ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಹಫೀಜ್ನ ಅರೆಸ್ಟ್ ಮಾಡಲಾಗಿದೆ. ಮಹಿಳೆ ಆರೋಪಿಯನ್ನು ದೂರ ಮಾಡಿದ್ದೇ ಕೊಲೆಗೆ ಕಾರಣವಾಗಿದ್ದು, ಫೀರ್ದೋಸ್ ಬಾನುಗೆ ಆರೋಪಿ ಹಫೀಜ್ ಜತೆ ಸಂಪರ್ಕ ಇತ್ತು ಎಂಬುದು ತನಿಖೆ ವೇಳೆ ಬಯಲಾಗಿದೆ.
ಮೃತ ಫೀರ್ದೋಸ್ ಬಾನು ಮತ್ತು ಆರೋಪಿ ಹಫೀಜ್ ಇಬ್ಬರು ಚೆನ್ನಾಗಿಯೇ ಇದ್ದರು. ಈ ವಿಚಾರ ಮಹಿಳೆ ಕುಟುಂಬಕ್ಕೂ ಗೊತ್ತಿತ್ತು. ಈ ನಡುವೆ ಫೀರ್ದೋಸ್ಗೆ ಕುಟುಂಬದವರು ಬುದ್ಧಿವಾದ ಹೇಳಿದ್ದರು. ಆ ಬಳಿಕ ಫೆ.28ರಂದು ಮಹಿಳೆ ಜತೆ ಹಫೀಜ್ ಗಲಾಟೆ ಮಾಡಿದ್ದ. ಈ ಸಂಬಂಧ ಚಂದ್ರಾಲೇಔಟ್ ಪೊಲೀಸರಿಗೆ ಫೀರ್ದೋಸ್ ಬಾನು ಕುಟುಂಬ ದೂರು ನೀಡಿತ್ತು.
ಇನ್ನು ಪ್ರಕರಣ ಮಾಹಿತಿ ನೀಡಿರುವ ಪಶ್ಚಿಮ ವಲಯ ಡಿಸಿಪಿ ಯತೀಶ್, ಆರೋಪಿ ಹಫೀಜ್ ಮತ್ತು ಕೊಲೆಯಾಗಿರುವ ಫಿರ್ದೋಸ್ ಬಾನು ಇಬ್ಬರಿಗೂ ಪ್ರತ್ಯೇಕ ಮದುವೆಯಾಗಿ ಮಕ್ಕಳಿದ್ದಾರೆ. ಆರೋಪಿ ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮಹಿಳೆ ನಿನ್ನೆ ಕೆಲಸಕ್ಕೆ ಹೋಗಿ ಬರುವಾಗ ಹಿಂಬಾಲಿಸಿಕೊಂಡು ಬಂದಿದ್ದ ಆತ, ಸುಮಾರು ಆರೇಳು ಬಾರಿ ಚಾಕುವಿನಿಂದ ಇರಿದ್ದಿದ್ದಾನೆ. ತಕ್ಷಣವೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ.
For More Updates Join our WhatsApp Group :




