ಬೆಂಗಳೂರಲ್ಲಿ ಹಳೇ ವಾಹನಗಳಿಗೆ ಕಟ್ಟುನಿಟ್ಟಿನ ಕ್ರಮ: D.K ಶಿವಕುಮಾರ್ ಎಚ್ಚರಿಕೆ

ಬೆಂಗಳೂರಲ್ಲಿ ಹಳೇ ವಾಹನಗಳಿಗೆ ಕಟ್ಟುನಿಟ್ಟಿನ ಕ್ರಮ: D.K ಶಿವಕುಮಾರ್ ಎಚ್ಚರಿಕೆ

ನಾನ್ ಪಾರ್ಕಿಂಗ್‌ನಲ್ಲಿ ವಾಹನಕ್ಕೆ ಕ್ರಮ.

ಬೆಂಗಳೂರು ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಹೆಚ್ಚು ಕಾಲ ಹಳೇ ವಾಹನಗಳನ್ನು ನಿಲ್ಲಿಸಿದರೂ ಟೋಯಿಂಗ್ ಮಾಡಲಾಗುವುದು. ನಗರದ ರಸ್ತೆಗಳಲ್ಲಿ ಎಲ್ಲೆಲ್ಲಿ ಹಳೇ ವಾಹನಗಳನ್ನು ನಿಲ್ಲಿಸಿದ್ದಾರೋ ಅದನ್ನು ತುಂಬಿಕೊಂಡು ಹೋಗಿ ನಿರ್ದಿಷ್ಟ ಜಾಗದಲ್ಲಿ ಡಂಪ್ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ​ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ

ವಿಧಾನಸೌಧದಲ್ಲಿಂದು ಜಿಬಿಎ 5 ನಗರ ಪಾಲಿಕೆಗಳ 2026-27ನೇ ಸಾಲಿನ ಆಯವ್ಯಯದ ಸಿದ್ಧತೆಯ ಕುರಿತು ಅಧಿಕಾರಿಗಳು ಹಾಗೂ ಬೆಂಗಳೂರಿನ ಶಾಸಕರೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್​​ ಪೂರ್ವಭಾವಿ ಸಭೆ ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಳೇ ವಾಹನಗಳನ್ನು ಟೋಯಿಂಗ್ ಮಾಡಲು ಬೆಳ್ಳಳ್ಳಿ, ಮಿಟಗಾನಹಳ್ಳಿ, ಸೊಂಡೆಕೊಪ್ಪ, ಗಿಡ್ಡೇನಹಳ್ಳಿಗಳಲ್ಲಿ ಜಾಗ ನಿಗದಿ ಮಾಡಲಾಗಿದೆ ಎಂದು ಡಿಕೆ ಶಿವಕುಮಾರ್​ ಮಾಹಿತಿ ನೀಡಿದ್ದಾರೆ.

ಬೆಂಗಳೂರಲ್ಲಿ ಇನ್ಮುಂದೆ ಟೋಯಿಂಗ್ ಪ್ರಾರಂಭವಾಗಲಿದೆ. ಆ ಮೂಲಕ ಬೆಂಗಳೂರು ಟ್ರಾಫಿಕ್ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆ ಇಡಲಾಗಿದೆ. ನಾನ್ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಿದರೆ ಟೋಯಿಂಗ್​ ಮಾಡಲಾಗುವುದು. ಎಲ್ಲಾ ಕಾರ್ಪೊರೇಷನ್​​ಗೂ ಎರಡೆರಡು ಟೋಯಿಂಗ್ ವಾಹನ ನೀಡಿದ್ದು, ಈ ಬಗ್ಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಡಿಕೆ ಶಿವಕುಮಾರ್​ ಹೇಳಿದ್ದಾರೆ.

ವಾರ್ಡ್ ವೈಸ್ ಬಜೆಟ್ಗೆ ಒತ್ತಾಯ

ಇನ್ನು ಜಿಬಿಎ ಬಜೆಟ್​​ ಸಭೆ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್​​, ಇಂದು ಬೆಂಗಳೂರು ನಗರದ ಶಾಸಕರ ಜೊತೆ ಬಜೆಟ್ ಸಭೆ ಆಗಿದೆ. ಪ್ರಮುಖ ನಿರ್ಣಯ ಆಗಿದೆ. ಅಶೋಕ್ ಕೂಡ ಬಂದಿದ್ದರು. ಅಭಿಪ್ರಾಯ ತಿಳಿಸಿದ್ದಾರೆ. ವಾರ್ಡ್ ವೈಸ್ ಬಜೆಟ್ ನೀಡಬೇಕು ಎಂದು ಒತ್ತಿಯಿಸಿದ್ದಾರೆ ಎಂದರು. ಇನ್ನು ಶಾಸಕರಿಂದ ವಾರ್ಡಿಗೆ 5-10 ಕೋಟಿ ರೂ ಅನುದಾನ ಬೇಡಿಕೆ ವಿಚಾರವಾಗಿ ಮಾತನಾಡಿದ್ದು, ನೋಡೋಣ ಎಷ್ಟಾಗಲಿದೆ. ಅವರು ಆಕಾಶನೂ ಕೇಳ್ತಾರೆ, ಭೂಮಿನೂ ತಂದು ಕೊಡಿ ಅಂತ ಕೇಳುತ್ತಾರೆ. ನಮ್ಮಿಂದ ಎಷ್ಟಾಗಲಿದೆ ಅನ್ನೋದು ನೋಡಿ ಕೊಡುತ್ತೇವೆ ಎಂದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *