ರಾತ್ರಿ ಮಲಗುವ 3 ಗಂಟೆ ಮುಂಚೆ ಊಟ ಮಾಡಿ; ಆರೋಗ್ಯ ಕಾಪಾಡಿಕೊಳ್ಳಿ

ರಾತ್ರಿ ಮಲಗುವ 3 ಗಂಟೆ ಮುಂಚೆ ಊಟ ಮಾಡಿ; ಆರೋಗ್ಯ ಕಾಪಾಡಿಕೊಳ್ಳಿ

ನಿಮ್ಮ ಹೃದಯ, ರಕ್ತದೊತ್ತಡ ಮತ್ತು ನಿದ್ರೆ ಉತ್ತಮವಾಗಲಿ

ನೀವು ರಾತ್ರಿ ಮಲಗುವ ಮೊದಲು ಸೇವನೆ ಮಾಡುವ ಆಹಾರ ಆರೋಗ್ಯ ಕಾಪಾಡಿಕೊಳ್ಳಲು ತುಂಬಾ ಮುಖ್ಯವಾಗುತ್ತದೆ. ಅದರಲ್ಲಿಯೂ ಆಹಾರವನ್ನು 3 ಗಂಟೆಗಳ ಮೊದಲು ಸೇವನೆ ಮಾಡಬೇಕು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಈ ಒಂದು ಅಭ್ಯಾಸ ಅನೇಕ ರೀತಿಯ ರೋಗಗಳನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ. ಅಷ್ಟು ಮಾತ್ರವಲ್ಲ, ಇದಕ್ಕೆ ಪೂರಕವಾಗಿ ನಾರ್ತ್‌ವೆಸ್ಟರ್ನ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಸಂಶೋಧನೆ ನಡೆಸಿದ್ದು, ವ್ಯಕ್ತಿ ಮಲಗುವ 3 ಗಂಟೆಗಳ ಮೊದಲು ಆಹಾರ ಸೇವನೆ ಮಾಡುವುದರಿಂದ ಅಧಿಕ ರಕ್ತದೊತ್ತಡದಿಂದ ಹೃದಯ ಸಂಬಂಧಿ ಕಾಯಿಲೆಯ ವರೆಗೆ ಎಲ್ಲದರ ಅಪಾಯ ಕಡಿಮೆಯಾಗುತ್ತದೆ ಎಂದು ಹೇಳಿದೆ.

ಸಂಶೋಧನೆಯ ಪ್ರಕಾರ, ರಾತ್ರಿ ಮಲಗುವ ಮುನ್ನ ಹಲವಾರು ಗಂಟೆಗಳ ಮೊದಲು ಆಹಾರವನ್ನು ಸೇವಿಸುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗುತ್ತದೆ ಮತ್ತು ನಿದ್ರೆ ಸರಿಯಾಗಿ ಆಗಲು ಸಹಾಯವಾಗುತ್ತದೆ. ಅಷ್ಟು ಮಾತ್ರವಲ್ಲ, ಇದು ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ದೇಹವು ಸಿರ್ಕಾಡಿಯನ್ ಲಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಸಂಶೋಧನೆಯಿಂದ ತಿಳಿದುಬಂದಿದೆ. ಆದರೆ ತಡವಾಗಿ ಊಟ ಮಾಡಿದಲ್ಲಿ, ದೇಹದ ಸಿರ್ಕಾಡಿಯನ್ ಲಯ ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಜೊತೆಗೆ ಸಮಯವಲ್ಲದ ಸಮಯಕ್ಕೆ ಊಟ ಮಾಡುವುದರಿಂದ ಜೀರ್ಣಾಂಗ ವ್ಯವಸ್ಥೆಯು ರಾತ್ರಿಯಿಡೀ ಸಕ್ರಿಯವಾಗಿದ್ದು ಕೆಲಸ ಮಾಡುತ್ತದೆ. ಆಗ ಚಯಾಪಚಯ ಕ್ರಿಯೆಗೆ ಅಡ್ಡಿಯಾಗುತ್ತದೆ. ಪರಿಣಾಮವಾಗಿ, ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಹೃದ್ರೋಗದಂತಹ ಅಪಾಯ ಕೂಡ ಹೆಚ್ಚಾಗುತ್ತದೆ.

ಆರೋಗ್ಯ ಕಾಪಾಡಿಕೊಳ್ಳಲು ಸಲಹೆಗಳು:

ರಾತ್ರಿ ಊಟವನ್ನು ಸಂಜೆ 8 ಗಂಟೆಗೂ ಮುಂಚೆ ಮುಗಿಸಿಕೊಳ್ಳಿ, ರಾತ್ರಿ 11 ಗಂಟೆಗೂ ಮುಂಚೆ ಮಲಗಲು ಪ್ರಯತ್ನಿಸಿ, ಈ ನಿಯಮವನ್ನು ಪಾಲಿಸುವ ಮೊದಲು ಡಾಕ್ಟರ್ ಸಲಹೆ ಪಡೆಯುವುದು ಅತ್ಯಗತ್ಯ. ಈ ಸರಳ ಕ್ರಮದಿಂದ ಉತ್ತಮ ನಿದ್ರೆ, ಹೈ ಬ್ಲಡ್ ಪ್ರೆಶರ್ ನಿಯಂತ್ರಣ ಮತ್ತು ಪಚನ ವ್ಯವಸ್ಥೆಯನ್ನು ಸುಧಾರಿಸಬಹುದು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *