ರಾಜ್ಯದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಸಾಧ್ಯತೆ.

ರಾಜ್ಯದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಸಾಧ್ಯತೆ.

ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು : ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣಹವೆಯಿತ್ತು. ಆದರೆ ಇತ್ತೀಚಿಗೆ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿದು  ತಾಪಮಾನ ಸುಧಾರಿಸಿತ್ತು. ಇಂದೂ ಸಹ ಹಲವೆಡೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಿಂದ ಬೀದರ್​ವರೆಗೆ ಒಟ್ಟೂ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​?

ಬೀದರ್, ಕಲಬುರ್ಗಿ, ಯಾದಗಿರಿ, ಬಿಜಾಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ನೀಡಿದೆ.

ಎಲ್ಲೆಲ್ಲಿ ಒಣ ಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಆವರಿಸಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೀದರ್, ವಿಜಯಪುರ, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *