ಹೋಟೆಲ್ ಮಾಲೀಕರ ಗಮನಕ್ಕೆ: ವಾಣಿಜ್ಯ ಸಿಲಿಂಡರ್ ನೋಂದಣಿ ಕಡ್ಡಾಯ.

ಹೋಟೆಲ್ ಮಾಲೀಕರ ಗಮನಕ್ಕೆ: ವಾಣಿಜ್ಯ ಸಿಲಿಂಡರ್ ನೋಂದಣಿ ಕಡ್ಡಾಯ.

ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!

ಬೆಂಗಳೂರು : ಕರ್ನಾಟಕದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಸಮಸ್ಯೆ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. IOC, HP, GAIL ಮತ್ತು ಭಾರತ್ ಪೆಟ್ರೋಲಿಯಂ ಕಂಪನಿಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಕೇಂದ್ರ ಸರ್ಕಾರ ಹೆಚ್ಚುವರಿ 20% ಸಿಲಿಂಡರ್‌ಗಳನ್ನು ಪೂರೈಸಲು ಒಪ್ಪಿಗೆ ನೀಡಿದೆ ಎಂದು ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಆದರೆ, ಬ್ಲಾಕ್​​​ನಲ್ಲಿ ಮಾರಾಟ ಮಾಡುವುದನ್ನು ಹಾಗೂ ಅಧಿಕೃತವಲ್ಲದ ಮಾರುಕಟ್ಟೆಗೆ ಸಿಲಿಂಡರ್‌ಗಳು ಹೋಗುವುದನ್ನು ತಡೆಯಲು ಕೇಂದ್ರವು ನಿರ್ಣಯ ಕೈಗೊಂಡಿದೆ. ಅದರಂತೆ, ಎಲ್ಲಾ ವಾಣಿಜ್ಯ ಬಳಕೆದಾರರು, ಮುಖ್ಯವಾಗಿ ಹೋಟೆಲ್‌ಗಳು, ಒಂದು ವಾರದೊಳಗೆ GAIL ಕಂಪನಿಯೊಂದಿಗೆ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ನೋಂದಣಿ ಇಲ್ಲದಿದ್ದರೆ ಸಿಲಿಂಡರ್ ವಿತರಣೆ ಕಷ್ಟವಾಗಲಿದೆ.

ಈ ಕ್ರಮದಿಂದ ಕಪ್ಪು ಮಾರುಕಟ್ಟೆಯನ್ನು ತಡೆಯಬಹುದು ಮತ್ತು ಮುಂದಿನ ದಿನಗಳಲ್ಲಿ GAIL ಪೈಪ್‌ಲೈನ್ ಮೂಲಕ ಹೆಚ್ಚಿನ ಪೂರೈಕೆಗೆ ಅವಕಾಶವಾಗಲಿದೆ. ಈ ಹೆಚ್ಚುವರಿ ಪೂರೈಕೆಯು ರಾಜ್ಯದಲ್ಲಿ ವಾಣಿಜ್ಯ ಬಳಕೆದಾರರ ಬೇಡಿಕೆಯನ್ನು ಪೂರೈಸಲು ಸಹಾಯಕವಾಗಲಿದೆ. ಸದ್ಯಕ್ಕೆ, ರಾಜ್ಯದಲ್ಲಿ ಸುಮಾರು 15,000 ರಿಂದ 16,000 ವಾಣಿಜ್ಯ ಸಿಲಿಂಡರ್‌ಗಳ ಬೇಡಿಕೆ ಇದೆ ಎಂದು ಅಂದಾಜಿಸಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *