ಕೊಲಂಬಿಯಾದಲ್ಲಿ ಮಿಲಿಟರಿ ವಿಮಾನ ಪತನ: ಭಾರೀ ದುರಂತ

ಕೊಲಂಬಿಯಾದಲ್ಲಿ ಮಿಲಿಟರಿ ವಿಮಾನ ಪತನ: ಭಾರೀ ದುರಂತ

ಟೇಕ್ ಆಫ್ ಬಳಿಕವೇ ಅಪಘಾತ.

ಕೊಲಂಬಿಯಾ: ಕೊಲಂಬಿಯಾದಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಕೊಲಂಬಿಯಾದ ಮಿಲಿಟರಿಯ ವಿಮಾನವೊಂದು ಅಪಘಾತಕ್ಕೀಡಾಗಿದೆ.

ವಾಯುಪಡೆಯ ಈ ಹರ್ಕ್ಯುಲಸ್ ಸಿ -130 ವಿಮಾನವು 110 ಸೈನಿಕರನ್ನು ಹೊತ್ತೊಯ್ಯುತ್ತಿತ್ತು. ಈ ಘಟನೆಯಲ್ಲಿ ಕೊಲಂಬಿಯಾದ ವಿಮಾನದಲ್ಲಿದ್ದ ಎಲ್ಲ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಆದರೆ, ಕೊಲಂಬಿಯಾದ ಮಿಲಿಟರಿ ಇನ್ನೂ ಈ ಘಟನೆಯ ಸಾವಿನ ಪ್ರಮಾಣದ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *