17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ವರುಣಾರ್ಭಟ ಸಾಧ್ಯತೆ.

17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ವರುಣಾರ್ಭಟ ಸಾಧ್ಯತೆ.

ವರುಣಾರ್ಭಟ ಸಾಧ್ಯತೆ. ಕರ್ನಾಟಕ ಹವಾಮಾನ ವಾರ್ನಿಂಗ್.

ಬೆಂಗಳೂರು: ನಿನ್ನೆ ಒಣಹವೆಯಿಂದ ಕೂಡಿದ್ದ ರಾಜ್ಯದ ಹವಾಮಾನ ಇಂದು ಹಠಾತ್ತನೆ ಬದಲಾಗಿದೆ. ಕರಾವಳಿಯೂ ಸೇರಿದಂತೆ ರಾಜ್ಯದ ಹತ್ತಾರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಗದಗ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?

ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ/ಸೆ ವೆಗದ ಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ವರುಣಾರ್ಭಟವಿರಲಿದ್ದು, ಉಳಿದೆಡೆ ಒಣ ಹವೆಯಿರಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ದಾವಣಗೆರೆ, ಬಳ್ಳಾರಿ, ವಿಜಯನಗರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಗುಡುಗು ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *