ಚಿತ್ರವನ್ನು ಬ್ಯಾನ್ ಮಾಡಲು ವಕೀಲರ ಮನವಿ.
ರಣ್ವೀರ್ ಸಿಂಗ್ ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗಿ ಕೆಲ ದಿನಗಳಾಗಿದ್ದು, ಎಲ್ಲೆಡೆ ಸಿನಿಮಾಕ್ಕೆ ಭರ್ಜರಿ ರೆಸ್ಪಾನ್ಸ್ ಧಕ್ಕುತ್ತಿದೆ. ಕೆಲವೇ ದಿನಗಳಲ್ಲಿ ಸಿನಿಮಾ 500 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಮಲ್ಟಿಪ್ಲೆಕ್ಸ್ಗಳಲ್ಲಿ ಬೆಳಿಗಿನಿಂದ ಮಧ್ಯ ರಾತ್ರಿ ವರೆಗೆ ಸತತವಾಗಿ ಶೋಗಳನ್ನು ಪ್ರದರ್ಶನ ಮಾಡಲಾಗುತ್ತಿದೆ. ಕೆಲವರು ಸಿನಿಮಾ ಬಗ್ಗೆ ಅಸಮಾಧಾನ ಸಹ ವ್ಯಕ್ತಪಡಿಸಿದ್ದಾರೆ. ಆದರೆ ಇದೀಗ ಚೆನ್ನೈನ ವಕೀಲರೊಬ್ಬರು, ಸಿನಿಮಾ ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದು, ಸಿನಿಮಾದ ಮೇಲೆ ನಿಷೇಧ ಹೇರಬೇಕು ಎಂದು ಒತ್ತಾಯಿಸಿದ್ದಾರೆ.
ವಕೀಲರೊಬ್ಬರು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸುಶ್ರುತ್ ಅರವಿಂದ್ ಧರ್ಮಾಧಿಕಾರಿ ಮತ್ತು ನ್ಯಾಯಮೂರ್ತಿ ಜಿ ಅರುಳ್ ಮುರುಗನ್ ಅವರನ್ನೊಳಗೊಂಡ ಪೀಠದ ಮುಂದೆ ಈ ಅರ್ಜಿ ಸಲ್ಲಿಸಿ, ವಾದ ಮಂಡಿಸಿದ್ದು. ‘ಧುರಂಧರ್ 2’ ಸಿನಿಮಾವು ರಾಜಕೀಯ ವಿಷಯಗಳನ್ನು ಒಳಗೊಂಡಿದ್ದು, ಚುನಾವಣಾ ಸಮಯದಲ್ಲಿ ಇದು ಮತದಾರರ ಮೇಲೆ ಪ್ರಭಾವ ಬೀರಬಹುದು ಎಂದು ಅರ್ಜಿದಾರರು ವಾದಿಸಿದ್ದಾರೆ.
ಆದಿತ್ಯ ಧರ್ ನಿರ್ದೇಶನದ ಈ ಚಿತ್ರವು ಕರಾಚಿಯ ಲಿಯಾರಿ ಎಂಬ ಭೂಗತ ಜಗತ್ತಿನ ಹಿನ್ನೆಲೆಯಲ್ಲಿ ನಡೆಯುವ ಕಥೆಯಾಗಿದೆ. ಸಿನಿಮಾನಲ್ಲಿ ರಣವೀರ್ ಸಿಂಗ್, ಮಾಧವನ್ ಮತ್ತು ಸಂಜಯ್ ದತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಭಾರತದ ಸೈನಿಕನೊಬ್ಬ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರನ್ನು ಸೆದೆ ಬಡಿಯುವ ಕತೆಯನ್ನು ಒಳಗೊಂಡಿದೆ. ‘ಧುರಂಧರ್ 2’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಾಣುತ್ತಿದ್ದು, ಬಿಡುಗಡೆಯಾದ ಮೊದಲ ನಾಲ್ಕು ದಿನಗಳಲ್ಲೇ ವಿಶ್ವದಾದ್ಯ ಸುಮಾರು 750 ಕೋಟಿಗೂ ಹೆಚ್ಚು ಮೊತ್ತ ಗಳಿಸಿದೆ ಎನ್ನಲಾಗುತ್ತಿದೆ.
For More Updates Join our WhatsApp Group :




