ಐಪಿಎಲ್ 2026ಕ್ಕೆ ಹೊಸ ಸ್ಪಾನ್ಸರ್ ಘೋಷಣೆ.
ಬೆಂಗಳೂರು: ಐಪಿಎಲ್ (IPL) ಅಂದರೆ ಕ್ರಿಕೆಟ್ ಪ್ರೇಮಿಗಳಿಗೆ ಎಲ್ಲಿಲ್ಲದ ಸಂಭ್ರಮ. ಐಪಿಎಲ್ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ರೈಸರ್ಸ್ ಹೈದರಾಬಾದ್ ನಡುವೆ ಮೊದಲ ಪಂದ್ಯ ನಡೆಯಲಿದೆ. ಆರ್ಸಿಬಿ ಪಂದ್ಯ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡಿಗರ ಹೆಮ್ಮೆಯ ಬ್ರಾಂಡ್ ಕೆಎಂಎಫ್ (KMF) 2026ರ ಆವೃತ್ತಿಯಲ್ಲಿ ಆರ್ಸಿಬಿಗೆ ಪ್ರಾಯೋಜಕತ್ವ ನೀಡಿದೆ. ಈ ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿದೆ.
2026ರ ಆವೃತ್ತಿಯಲ್ಲಿ ಕನ್ನಡಿಗರ ಹೆಮ್ಮೆಯ ಬ್ರಾಂಡ್ ಕೆಎಂಎಫ್ ಪ್ರಾಯೋಜಕತ್ವ ನೀಡುವ ಮೂಲಕ ಆರ್ಸಿಬಿಗೆ ಸಾಥ್ ನೀಡಿದೆ. ಆರ್ಸಿಬಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ. ಹಾಗಾಗಿ ಪ್ರಾಯೋಜಕತ್ವ ನೀಡುವ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಂದಿನಿ ಉತ್ಪನ್ನ ಪರಿಚಯಕ್ಕೆ ಮುಂದಾಗಿದೆ.
KMF ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹೇಳಿದ್ದಿಷ್ಟು
ಈ ಬಗ್ಗೆ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ KMF ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ, 2026ರ ಆವೃತ್ತಿಯಲ್ಲಿ ಆರ್ಸಿಬಿಗೆ KMF ಪ್ರಾಯೋಜಕತ್ವ ನೀಡಿದೆ. ಈ ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿದೆ. ಆರ್ಸಿಬಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ, ಹಾಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಂದಿನಿ ಉತ್ಪನ್ನ ಪರಿಚಯವಾಗಲಿದೆ. ವಿಚಾಟ್ ಕೊಹ್ಲಿ, ರಜತ್ ಪಾಟಿದಾರ್, ದೇವದತ್ತ ಪಡಿಕಲ್ರಿಂದ KMF ಉತ್ಪನ್ನ ಪ್ರಚಾರಕ್ಕೆ ಮುಂದಾಗಿದ್ದೇವೆ. 4 ಕೋಟಿ ರೂ ವೆಚ್ಚದಲ್ಲಿ KMF ಒಂದು ವರ್ಷದ ಟೆಂಡರ್ ಪಡೆದಿದೆ ಎಂದು ಮಾಹಿತಿ ನೀಡಿದ್ದಾರೆ.
ಯುದ್ಧದಿಂದಾಗಿ ನಂದಿನಿ ಉತ್ಪನ್ನಗಳಿಗೆ ದೊಡ್ಡ ಎಫೆಕ್ಟ್ ಆಗಿಲ್ಲ
ಟಿಟಿಡಿ ತುಪ್ಪದ ಟೆಂಡರ್ನಲ್ಲಿ ಮಾತುಕಥೆ ನಡೆದಿದೆ. ಟೆಂಡರ್ ಹಾಕಿದ್ದೇವೆ ಇನ್ನು ಅಂತಿಮ ಆಗಿಲ್ಲ. ನಮ್ಮಲ್ಲಿ ಉತ್ಪಾದನೆ ಸಾಕಷ್ಟಿದೆ. ಟಿಟಿಡಿಗೆ ಬೇಕಾದಷ್ಟು ತುಪ್ಪ ಪೂರೈಕೆ ಮಾಡಲು ಶಕ್ತವಾಗಿದ್ದೇವೆ ಎಂದು KMF ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹೇಳಿದ್ದಾರೆ.
For More Updates Join our WhatsApp Group :




