Siddaramaiah ರಾಹುಕಾಲ ನೋಡಿ Budget ಮಂಡನೆ ಮಾಡಿದನೆ? ನಿಜ!

ಸಿದ್ದರಾಮಯ್ಯ ರಾಹುಕಾಲ ನೋಡಿ ಬಜೆಟ್ ಮಂಡನೆ ಮಾಡಿದನೆ? ನಿಜ!

ರಾಹುಕಾಲ ಬಿಟ್ಟು ಬಜೆಟ್ ಮಂಡಿಸಿದ್ದು ನಿಜವೆಂದ ಸಿದ್ದರಾಮಯ್ಯ!

ಬೆಂಗಳೂರು: ರಾಹುಕಾಲವನ್ನು ತಪ್ಪಿಸುವುದಕ್ಕಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೆ ಬಜೆಟ್ ಮಂಡನೆ ಸಮಯ ನಿಗದಿಪಡಿಸಿದ್ದು ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೇಳಿದ್ದರು. ಇದೀಗ ವಿಧಾನಸಭೆಯಲ್ಲಿ ಕೂಡ ಆ ವಿಚಾರ ಚರ್ಚೆಯಾಗಿದೆ. ರಾಹುಕಾಲ ತಪ್ಪಿಸುವುದಕ್ಕಾಗಿಯೇ ಆ ಸಮಯ ನಿಗದಿ ಮಾಡಿದ್ದು ನಿಜ ಎಂದು ಖುದ್ದು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ! ಅಲ್ಲದೆ, ಅದಕ್ಕೆ ಕಾರಣವನ್ನು ಕೂಡ ಕೊಟ್ಟಿದ್ದಾರೆ.

ಬಜೆಟ್ ಮೇಲಿನ ಚರ್ಚೆಗೆ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಬುಧವಾರ ಉತ್ತರ ನೀಡಿದರು. ಇದೇ ವೇಳೆ, ಪ್ರತಿಪಕ್ಷ ನಾಯಕ ಆರ್ ಅಶೋಕ್, ರಾಹುಕಾಲ ನೋಡಿಕೊಂಡು ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದ ಬಗ್ಗೆ ಉಲ್ಲೇಖಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಹೌದು, ‘ರಾಹುಕಾಲ ನೋಡಿಕೊಂಡು ಬಜೆಟ್ ಮಂಡಿಸಿದ್ದಾರೆ’ ಎಂಬುದು ನಿಜ ಎಂದರು.

ರಾಹುಕಾಲ ನೋಡಿಕೊಂಡು ಬಜೆಟ್ ಮಂಡಿಸಿದ್ದಕ್ಕೆ ಸಿದ್ಧರಾಮಯ್ಯ ಕೊಟ್ಟ ಕಾರಣವೇನು?

ಸಾಮಾನ್ಯವಾಗಿ ಬಜೆಟ್ ಮಂಡನೆ ಬೆಳಗ್ಗೆ 10 ಗಂಟೆ ಅಥವಾ 11 ಗಂಟೆಗೆ ಮಾಡುತ್ತಾರೆ. ಆದರೆ ಈ ಬಾರಿ 10.15ಕ್ಕೆ ಸಿದ್ದರಾಮಯ್ಯ ಬಜೆಟ್ ಮಂಡನೆ ಸಮಯ ನಿಗದಿ ಮಾಡಿಕೊಂಡಿದ್ದಾರೆ. ಏಕೆಂದು ಕುತೂಹಲದಿಂದ ವಿಚಾರಿಸಿದಾಗ ಗೊತ್ತಾಗಿದ್ದು, ಬೆಳಗ್ಗೆ 10. 30 ರಿಂದ ರಾಹು ಕಾಲ ಇದೆ ಎಂಬುದು. ಬೆಳಗ್ಗೆ 7.30 ಗಂಟೆ ಯಿಂದ 9 ಗಂಟೆಯವರೆಗೂ ಗುಳಿಕಾಲ. #ಮೂಢನಂಬಿಕೆ ಎಂಬ ಹ್ಯಾಷ್​ಟ್ಯಾಗ್​ನೊಂದಿಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಬಜೆಟ್ ದಿನವೇ ಫೇಸ್​​ಬುಕ್​​ನಲ್ಲಿ ಪೋಸ್ಟ್ ಮಾಡಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *