LPG ಬಿಕ್ಕಟ್ಟಿಗೆ ಪರಿಹಾರ: ಭಾರತದಲ್ಲಿ PNG ಇನ್ಫ್ರಾಸ್ಟ್ರಕ್ಚರ್ ವಿಸ್ತರಣೆ.

LPG ಬಿಕ್ಕಟ್ಟಿಗೆ ಪರಿಹಾರ: ಭಾರತದಲ್ಲಿ PNG ಇನ್ಫ್ರಾಸ್ಟ್ರಕ್ಚರ್ ವಿಸ್ತರಣೆ.

ಭಾರತದಲ್ಲಿ ಪಿಎನ್​ಜಿ ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ನಾಂದಿ ಹಾಡುತ್ತಿದೆ ಎಲ್​ಪಿಜಿ ಬಿಕ್ಕಟ್ಟು.

ನವದೆಹಲಿ: ಎಲ್​ಪಿಜಿ ಪೂರೈಕೆಯಲ್ಲಿ ಉದ್ಭವಿಸಿರುವ ಬಿಕ್ಕಟ್ಟು ಈಗ ಭಾರತದಲ್ಲಿ ಪರ್ಯಾಯ ವ್ಯವಸ್ಥೆ ಹೆಚ್ಚಿಸಲು ಅನಿವಾರ್ಯವಾಗಿಸಿದೆ. ಸರ್ಕಾರವು ನೈಸರ್ಗಿಕ ಅನಿಲ ಸೌಕರ್ಯಗಳಾದ ಪಿಎನ್​ಜಿ ಮತ್ತು ಸಿಎನ್​ಜಿ ಲಭ್ಯತೆ ಹೆಚ್ಚಿಸಲು ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ಬೇಕಾದ ಸುಧಾರಣೆಗಳನ್ನು ತರುತ್ತಿದೆ. ಪಿಎನ್​ಜಿ ಸೌಕರ್ಯವನ್ನು ವೇಗವಾಗಿ ಹೆಚ್ಚಿಸಲು ಈ ಸುಧಾರಣೆ ತರಲಾಗಿದೆ. ಈ ಸಂಬಂಧ ಸರ್ಕಾರವು ನೈಸರ್ಗಿಕ ಅನಿಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ವಿತರಣೆ ಆದೇಶ 2026 ಅನ್ನು ಹೊರಡಿಸಿದೆ.

ವಿವಿಧ ಪ್ರದೇಶಗಳಿಗೆ ನ್ಯಾಚುರಲ್ ಗ್ಯಾಸ್ ಪೈಪ್​ಲೈನ್ ಹಾಕಲು ಸಿಟಿ ಗ್ಯಾಸ್ ಡಿಸ್ಟ್ರಿಬ್ಯೂಟರ್​ಗಳಿಗೆ ಅನೇಕ ತಡೆಗಳು, ಸಮಸ್ಯೆಗಳಿವೆ. ಭೂಮಿ ಸಿಗದೇ ಇರುವುದು, ಅನುಮೋದನೆ ದೊರಕದೇ ಇರುವುದು, ಅಧಿಕ ಶುಲ್ಕ ಇರುವುದು ಇತ್ಯಾದಿ ತಡೆಗಳನ್ನು ನಿವಾರಿಸಿ, ನ್ಯಾಚುರಲ್ ಗ್ಯಾಸ್ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಸಾಗಣೆಗೆ ಪೈಪ್​ಲೈನ್ ಅಳವಡಿಸುವ ಕಾರ್ಯಗಳನ್ನು ಸುಗಮಗೊಳಿಸಲು ಸರ್ಕಾರವು ಏಕರೀತಿಯ ಒಂದು ಫ್ರೇಮ್​ವರ್ಕ್ ರೂಪಿಸುವುದು ಅಗತ್ಯ ಇದೆ ಎಂದು ಪೆಟ್ರೋಲಿಯಂ ಸಚಿವಾಲಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್​ಪಿಜಿ ಪೂರೈಕೆಯಲ್ಲಿ ಆಗಿರುವ ವ್ಯತ್ಯಯವನ್ನು ಸರಿದೂಗಿಸಲು ಸರ್ಕಾರವು ನೈಸರ್ಗಿಕ ಅನಿಲದತ್ತ ಗಮನ ಹರಿಸಿದೆ. ನ್ಯಾಚುರಲ್ ಗ್ಯಾಸ್​ಗೆ ಭಾರತವು ಗಲ್ಫ್ ರಾಷ್ಟ್ರಗಳ ಮೇಲೆ ಅವಲಂಬನೆ ಕಡಿಮೆ ಇದೆ. ಹೀಗಾಗಿ, ಎಲ್​ಪಿಜಿಗೆ ಹೋಲಿಸಿದರೆ ಎಲ್​ಎನ್​ಜಿ ಮತ್ತು ಪಿಎನ್​ಜಿ ಪೂರೈಕೆಯಲ್ಲಿ ಹೆಚ್ಚಿನ ವ್ಯತ್ಯಯವಾಗಿಲ್ಲ. ಆದರೆ, ಪಿಎನ್​ಜಿ ಅಥವಾ ಪೈಪ್ಡ್ ಗ್ಯಾಸ್ ನೆಟ್ವರ್ಕ್ ಎಲ್ಲೆಡೆ ಸಾಕಷ್ಟು ಮಟ್ಟದಲ್ಲಿ ಲಭ್ಯ ಇಲ್ಲದಿರುವುದು ಪ್ರಮುಖ ಹಿನ್ನಡೆಯಾಗಿದೆ.

ಈ ಆದೇಶವು ಸಿಟಿ ಗ್ಯಾಸ್ ಡಿಸ್ಟ್ರಿಬ್ಯೂಟಿಂಗ್ ಸಂಸ್ಥೆಗಳಿಗೆ ಹೆಚ್ಚಿನ ಶಕ್ತಿ ಸಿಗಲಿದೆ. ತ್ವರಿತವಾಗಿ ಪೈಪ್​ಲೈನ್​ಗಳನ್ನು ಅಳವಡಿಸಲು ಸಾಧ್ಯವಾಗಬಹುದು. ಇದರಿಂದ ಜನರನ್ನು ಎಲ್​ಪಿಜಿಯಿಂದ ಪಿನ್​ಜಿ ಸಂಪರ್ಕಕ್ಕೆ ವರ್ಗಾಯಿಸುವುದು ಸುಲಭವಾಗುತ್ತದೆ. ಎಲ್​ಪಿಜಿ ತಂದಿರುವ ಬಿಕ್ಕಟ್ಟು ಈಗ ಪಿಎನ್​ಜಿ ಸೌಕರ್ಯ ಹೆಚ್ಚಿಸಲು ಅನುಕೂಲ ಮಾಡಿಕೊಟ್ಟಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *