ಧಾರವಾಡದ ಮಾಜಿ ಶಾಸಕನ ಪುತ್ರನ ಸಾ*ಗೆ Big Twist!

ಧಾರವಾಡದ ಮಾಜಿ ಶಾಸಕನ ಪುತ್ರನ ಸಾ*ಗೆ Big Twist!

ಮಾಜಿ ಶಾಸಕನ ಪುತ್ರ ರಾಜು ಬೋಳಶೆಟ್ಟಿ ಹ* ಪ್ರಕರಣಕ್ಕೆ ನೂತನ ತಿರುವು.

ಧಾರವಾಡ: ಜಿಲ್ಲೆಯಲ್ಲಿ ಮಾಜಿ ಶಾಸಕನ ಪುತ್ರನ ಹತ್ಯೆ ಪ್ರಕರಣ ಭಾರೀ ತಿರುವು ಪಡೆದಿದ್ದು, ಘಟನೆ ಪೂರ್ವನಿಯೋಜಿತ ಕೊಲೆ ಎಂಬ ಶಂಕೆ ಮತ್ತಷ್ಟು ಗಾಢವಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಅವರ ಶವ ಧಾರವಾಡ ತಾಲೂಕಿನ ರಾಮಾಪುರ ಅರಣ್ಯ ಪ್ರದೇಶದಲ್ಲಿ ಕಾರಿನೊಳಗೆ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿತ್ತು.  ಈ ಪ್ರಕರಣದಲ್ಲಿ ಮೂವರಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆಗೆ ಸಾಲದ ರೂಪದಲ್ಲಿ ಹಣ ನೀಡಿದ್ದ ರಾಜು

ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಗುರುತು ಸಿಗದಷ್ಟು ಸ್ಥಿತಿಯಲ್ಲಿ ಸುಟ್ಟು ಕರಕಲಾದ ರಾಜುನ ಶವ ಸಿಕ್ಕಿತ್ತು. ಈ ಘಟನೆಯು ಜಿಲ್ಲೆಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದು, ಇದು ಪೂರ್ವನಿಯೋಜಿತ ಕೊಲೆ ಎಂಬ ಬಲವಾದ ಶಂಕೆ ವ್ಯಕ್ತವಾಗಿತ್ತು. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಮೃತನಿಗಿದ್ದ ಅನೈತಿಕ ಸಂಬಧದ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ.

ಶವವನ್ನು ಕಾರು ಸಮೇತ ಸುಟ್ಟ ಆರೋಪಿಗಳು

ರಾಜು ಬೋಳಶೆಟ್ಟಿಯ ಕಾರಿನಲ್ಲೇ ರಾಮಾಪುರ ಅರಣ್ಯಕ್ಕೆ ಆತನ ಶವವನ್ನು ತಂದ ಈ ಮೂವರು, ಹಿಂದಿನ ಸೀಟಿನಲ್ಲಿ ಶವವಿಟ್ಟು, ತಾವು ತಂದಿದ್ದ 10 ಲೀ. ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗಿದೆ. ಘಟನೆ ಬಳಿಕ ಮೂವರೂ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರ ಚುರುಕಿನ ಕಾರ್ಯಾಚರಣೆಯಿಂದ ಕೆಲವೇ ಘಂಟೆಗಳಲ್ಲಿ ಮೂವರನ್ನೂ ಸೆರೆ ಹಿಡಿಯಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *