ಕರ್ನಾಟಕ ಹವಾಮಾನ ವರದಿ.

ಕರ್ನಾಟಕ ಹವಾಮಾನ ವರದಿ.

ಆಲಿಕಲ್ಲು ಮಳೆ ಸಾಧ್ಯತೆ – 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.

ಬೆಂಗಳೂರು: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಸಹ ಹಲವೆಡೆ ಮಳೆಯಾಗುವ  ಸೂಚನೆಯಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ಗುಡುಗು, ಆಲಿಕಲ್ಲು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಈ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು-ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೆಂಜ್ ಅಲರ್ಟ್​ ನೀಡಲಾಗಿದೆ. ಬೀದರ್, ಯಾದಗಿರಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದ್ದು, ಉಳಿದೆಡೆ ಒಣ ಹವೆಯಿರಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರಿನಲ್ಲೂ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *