ವಿಕ್ಟೋರಿಯಾ ಆಸ್ಪತ್ರೆ ಮೇಲೆ Lokayukta ದಿಢೀರ್ ದಾಳಿ.!

ವಿಕ್ಟೋರಿಯಾ ಆಸ್ಪತ್ರೆ ಮೇಲೆ Lokayukta ದಿಢೀರ್ ದಾಳಿ.!

ಕರ್ನಾಟಕ ಲೋಕಾಯುಕ್ತ ತಂಡದ ಏಕಾಏಕಿ ಭೇಟಿ.

ಬೆಂಗಳೂರು : ಕರ್ನಾಟಕ ಲೋಕಾಯುಕ್ತ ತಂಡದ ಏಕಾಏಕಿ ಭೇಟಿ ವೇಳೆ ಶಾಂತವೇರಿ ಗೋಪಾಲ ಗೌಡ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್‌ನಲ್ಲಿ ಗಂಭೀರ ಅವ್ಯವಸ್ಥೆಗಳು ಬೆಳಕಿಗೆ ಬಂದಿವೆ. ಐಸಿಯುನಲ್ಲಿ ಅವಧಿ ಮೀರಿದ ಔಷಧಿಗಳು ಪತ್ತೆಯಾಗಿದ್ದು, ಖಾಲಿ ಹಾಸಿಗೆಗಳಿದ್ದರೂ ತುರ್ತು ರೋಗಿಗೆ ದಾಖಲಾತಿ ನಿರಾಕರಿಸಿರುವುದು ಗಮನಕ್ಕೆ ಬಂದಿದೆ.

ಹಾಸಿಗೆಗಳಿದ್ದರೂ ರೋಗಿಗಳಿಗೆ ದಾಖಲಾತಿ ಇಲ್ಲ!

ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ , ವೆಂಟಿಲೇಟರ್ ದೋಷದಿಂದ ಹಾಸಿಗೆಗಳು ಬಳಸಿಲ್ಲ ಎಂದು ಹೇಳಿರುವುದು ಆಸ್ಪತ್ರೆಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದಿದ್ದಾರೆ. ಪ್ರಕರಣದ ವರದಿಯನ್ನು ಮುಖ್ಯ ಕಾರ್ಯದರ್ಶಿ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ಕಳುಹಿಸಲು ಸೂಚಿಸಲಾಗಿದ್ದು, ವಿಚಾರಣೆಯನ್ನು ಏಪ್ರಿಲ್ 27ಕ್ಕೆ ಮುಂದೂಡಲಾಗಿದೆ.

ಅಕ್ರಮ ಚಟುವಟಿಕೆಗಳಿಗೆ ಬ್ರೇಕ್

ಲೋಕಾಯುಕ್ತ ಮುಂದೆ ಟ್ರಾಮಾ ಕೇರ್ ಸೆಂಟರ್‌ನ ಸಮಸ್ಯೆಗಳ ಕುರಿತು ಡಾ. ಅಸೀಮಾ ಅವರು ಮಾಹಿತಿ ನೀಡಿದ್ದು, ಹಾಸಿಗೆಗಳ ಕೊರತೆಯಿಂದ ಖಾಸಗಿ ಆಂಬ್ಯುಲೆನ್ಸ್ ಚಾಲಕರು ಹಾಗೂ ಮಧ್ಯವರ್ತಿಗಳು ರೋಗಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದರು. ಅವರಿಂದ ಉಂಟಾಗುವ ಅಡಚಣೆಗಳನ್ನು ನಿಯಂತ್ರಣಕ್ಕೆ ಬಾರದ ಮಟ್ಟಕ್ಕೆ ತಲುಪಿದ್ದು, ಕೆಲವೊಮ್ಮೆ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಯ ಮೇಲೆ ದಾಳಿ ನಡೆದ ಘಟನೆಗಳೂ ನಡೆದಿವೆ ಎಂದು ತಿಳಿಸಿದರು.

ಆದರೆ ಈ ಬಗ್ಗೆ ಯಾವುದೇ ನಿರ್ದಿಷ್ಟ ದೂರು ದಾಖಲಾಗಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ದಕ್ಷಿಣ ವಿಭಾಗದ ಡಿಸಿಪಿ ಲೋಕಾಯುಕ್ತರಿಗೆ ತಿಳಿಸಿದ್ದಾರೆ. ಈ ಹಿನ್ನೆಲೆ ಆಸ್ಪತ್ರೆ ಆವರಣದಲ್ಲಿ ಪೊಲೀಸ್ ಬಂದೋಬಸ್ತ್ ಬಲಪಡಿಸಿ, ಅಕ್ರಮ ಚಟುವಟಿಕೆ ನಡೆಸುವವರನ್ನು ಗುರುತಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ಸೂಚನೆ ನೀಡಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *