ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ.
ಕಾಠ್ಮಂಡು: ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ನೂತನ ಪ್ರಧಾನಿಯಾಗಿ ಬಾಲೆನ್ ಶಾ ಹಾಗೂ ಸಂಪುಟ ಸಚಿವರು ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅವರನ್ನು ಬಂಧಿಸಲಾಗಿದೆ. ಕಳೆದ ವರ್ಷ ನಡೆದ ಭ್ರಷ್ಟಾಚಾರ ವಿರೋಧಿ ‘ಜೆನ್ ಜಿ ’ ಪ್ರತಿಭಟನೆಯ ವೇಳೆ ಕನಿಷ್ಠ 77 ಜನರ ಸಾವಿಗೆ ಕಾರಣವಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಲಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಒಲಿ ಅವರೊಂದಿಗೆ ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರ ಓಂ ಅಧಿಕಾರಿ ಖಚಿತಪಡಿಸಿದ್ದಾರೆ.
ವಿಶೇಷ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಗೌರಿ ಬಹದ್ದೂರ್ ಕಾರ್ಕಿ ನೇತೃತ್ವದ ತನಿಖಾ ಸಮಿತಿಯು ನೀಡಿದ ಶಿಫಾರಸಿನ ಮೇರೆಗೆ ಈ ಬಂಧನವಾಗಿದೆ. ಪ್ರತಿಭಟನಾಕಾರರ ಮೇಲೆ ಅತಿಯಾದ ಮತ್ತು ಅನಿಯಂತ್ರಿತ ಬಲಪ್ರಯೋಗ ಮಾಡಿದ್ದಲ್ಲದೆ, ಹಿಂಸಾಚಾರವನ್ನು ತಡೆಯುವಲ್ಲಿ ಒಲಿ ಸರ್ಕಾರ ವಿಫಲವಾಗಿತ್ತು ಎಂದು ತನಿಖಾ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ವಿಶೇಷವೆಂದರೆ, ಬಾಲೆನ್ ಶಾ ಅವರು ನೇಪಾಳದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಮರುದಿನವೇ ಈ ಪ್ರಮುಖ ಬೆಳವಣಿಗೆ ನಡೆದಿದೆ.
For More Updates Join our WhatsApp Group :




