6 ತಿಂಗಳ ಮದುವೆ… ಕ್ಷಣಾರ್ಧದಲ್ಲಿ ದುರಂತ ಅಂತ್ಯ.

6 ತಿಂಗಳ ಮದುವೆ… ಕ್ಷಣಾರ್ಧದಲ್ಲಿ ದುರಂತ ಅಂತ್ಯ.

ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ:

ಶಿವಮೊಗ್ಗ: ಪ್ರೀತಿಸಿ  ಕೇವಲ ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಜೋಡಿ ದುರಂತ ಸಾವು ಕಂಡಿದೆ. ಹೌದು… ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಲಾರಿಗೆ ಬೈಕ್​ ಡಿಕ್ಕಿಯಾಗಿದ್ದು, ಬೈಕ್ ನಲ್ಲಿ ಇದ್ದಂತಹ ದಂಪತಿಗಳಾದ ಬಾಬು (30) ಹಾಗೂ ಸಾವಿತ್ರಿ (26) ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಆರು ತಿಂಗಳ ಹಿಂದೆ ಅಷ್ಟೇ ಸಪ್ತಪದಿ ತುಳಿದ್ದರು. ಆದ್ರೆ, ವಿಧಿ ಜೋಡಿಯನ್ನು ಬಾಳಲು ಬಿಟ್ಟಿಲ್ಲ. ಈ ಸಂಬಂಧ ಸಂಬಂಧಿಕ ಆಕ್ರಂದನ ಮುಗಿಲು ಮುಟ್ಟಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *