ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ
ಶಿವಮೊಗ್ಗ: ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳದಲ್ಲಿ ನಡೆದಿದೆ. ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಗಾಯಾಳುಗಳಿಗೆ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ಬಸ್ ಹೊರಟ್ಟಿತ್ತು. ಮಾರ್ಗ ಮಧ್ಯೆ ಅವಘಡ ಸಂಭವಿಸಿದೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
For More Updates Join our WhatsApp Group :




