ಹುಬ್ಬಳ್ಳಿ, ರಾಯಚೂರಿನಲ್ಲಿ ಕುಡಿಯುವ ನೀರಿನ ಸಂಕಷ್ಟ; ರಸ್ತೆ ತಡೆದು ಪ್ರತಿಭಟನೆ.

ಹುಬ್ಬಳ್ಳಿ, ರಾಯಚೂರಿನಲ್ಲಿ ಕುಡಿಯುವ ನೀರಿನ ಸಂಕಷ್ಟ; ರಸ್ತೆ ತಡೆದು ಪ್ರತಿಭಟನೆ.

ಬೇಸಿಗೆ ಆರಂಭ, ಕುಡಿಯುವ ನೀರು ಕೊರತೆಯಿಂದ ಸಾರ್ವಜನಿಕ ಆಕ್ರೋಶ

ಹುಬ್ಬಳ್ಳಿ/ರಾಯಚೂರು : ಬೇಸಿಗೆ ಆರಂಭವಾಗುತ್ತಿದ್ದಂತೆ  ಕರ್ನಾಟಕದ ಹಲವೆಡೆ ನೀರಿನ ಸಮಸ್ಯೆ ತಲೆದೋರಿದ್ದು, ಹುಬ್ಬಳ್ಳಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಹೆಚ್ಚಾಗಿದೆ. ಹುಬ್ಬಳ್ಳಿಯ ಕಿಲ್ಲೆ ವಾರ್ಡ್‌ನಲ್ಲಿ ವಾರಕ್ಕೊಮ್ಮೆ ಮಾತ್ರ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಸ್ಥಳೀಯರು ಪ್ರತಿದಿನವೂ ನೀರಿಗಾಗಿ ಪರದಾಡುತ್ತಿದ್ದಾರೆ.

ಹೀಗಾಗಿ ರಸ್ತೆ ತಡೆದು ಸಾರ್ವಜನಿಕರು ಪ್ರತಿಭಟನೆ ನಡೆಸಿರುವ ಪ್ರಸಂಗ ನಡೆದಿದೆ. ಅತ್ತ ರಾಯಚೂರು ಜಿಲ್ಲೆಯ ಹಲವು ಭಾಗಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆ, ಜಿಲ್ಲಾಧಿಕಾರಿಗಳು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

 ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. 150ಕ್ಕೂ ಹೆಚ್ಚು ಕೆರೆಗಳನ್ನು ಭರ್ತಿ ಮಾಡುವಂತೆ ಆದೇಶಿಸಿದ್ದು, ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *