ಜಮೀರ್ ಅಹಮ್ಮದ್ ಖಾನ್ ಗೈರುಹಾಜರಿ ನಡುವೆ ಡಿಸಿಎಂ ಹೇಳಿಕೆ ಸಂಚಲನ
ದಾವಣಗೆರೆ: ಸಚಿವ ಎಸ್ಎಸ್ ಮಲ್ಲಿಕಾರ್ಜು ಆಡಿದ ಮಾತು ಹಾಗೂ ಮುಸ್ಲಿಮರಿಗೆ ಟಿಕೆಟ್ ಕೈತಪ್ಪಿದ್ದರಿಂದ ಜಮಿರ್ ಅಹಮ್ಮದ್ ಖಾನ್ ಮುನಿಸಿಕೊಂಡಿದ್ದು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಪ್ರಚಾರದಿಂದ ದೂರ ಉಳಿದುಕೊಂಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸುಮಾರು 80 ಸಾವಿರ ಮುಸ್ಲಿಂ ಮತಗಳಿವೆ. ಹೀಗಾಗಿ ಜಮೀರ್ ಅಹಮ್ಮದ್ ಖಾನ್ ಅವರನ್ನು ಪ್ರಚಾರಕ್ಕೆ ಕರೆಯುಸುವಂತೆ ಆಗ್ರಹಗಳು ವ್ಯಕ್ತವಾಗುತ್ತಿವೆ. ಆದ್ರೆ, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ ಒಬ್ಬರಿಂದ ಪಕ್ಷ ನಡೆಯಲ್ಲ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದು, ಇದು ಭಾರೀ ಸಂಚಲ ಮೂಡಿಸಿದೆ.
ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ಶೇ. 79ರಷ್ಟು ಜನ ಕಾಂಗ್ರೆಸ್ ಅಭ್ಯರ್ಥಿ ಪರ ಒಲವು ಹೊಂದಿದ್ದಾರೆ. ಶಾಮನೂರು ಶಿಕ್ಷಣ ಸಂಸ್ಥೆಯಲ್ಲಿ ಲಕ್ಷಾಂತರ ಜನ ಶಿಕ್ಷಣ ಪಡೆದಿದ್ದಾರೆ. ಸಚಿವ ಜಮೀರ್ ಕೇರಳದಲ್ಲಿ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡ್ತಿದ್ದಾರೆ.ಮುಗಿಸಿಕೊಂಡು ಬಂದ ಮೇಲೆ ಎಲ್ಲಿಗೆ ಕಳುಹಿಸುವ ಬಗ್ಗೆ ಚರ್ಚಿಸುತ್ತೇವೆ. ಒಬ್ಬರಿಂದ ಪಕ್ಷ ನಡೆಯಲ್ಲ. ಅದು ಡಿಕೆ, ಸಿಎಂ, ಜಮೀರ್ ಆಗಬಹುದು. 16 ನಿಗಮ ಮಂಡಳಿಗಳಲ್ಲಿ ಮುಸ್ಲಿಮರಿಗೆ ಅಧ್ಯಕ್ಷ ಸ್ಥಾನ ನೀಡಿದ್ದೇವೆ. ಅಬ್ದುಲ್ ಜಬ್ಬಾರ್ಗೆ 3 ಬಾರಿ ಪರಿಷತ್ ಸದಸ್ಯ ಸ್ಥಾನ ನೀಡಿದ್ದೇವೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಜಮೀರ್ ಅಹಮ್ಮದ್ ಖಾನ್ಗೆ ಟಾಂಗ್ ಕೊಟ್ಟರು.
For More Updates Join our WhatsApp Group :




