ಅದ್ದೂರಿಯಾಗಿ ನಡೆದ ಲಕ್ಷ್ಮಿರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ.

ಅದ್ದೂರಿಯಾಗಿ ನಡೆದ ಲಕ್ಷ್ಮಿರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ.

ಮಧುಗಿರಿಯಲ್ಲಿ ಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ ಅದ್ಧೂರಿ.

ಮಧುಗಿರಿ : ತಾಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿ ಗ್ರಾಮದ ಐತಿಹಾಸಿಕ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ ಅಪಾರ ಸಂಖ್ಯೆಯ ಭಕ್ತಾದಿಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು. ರಥೋತ್ಸವಕ್ಕೆ ಬಂದ ಸಾವಿರಾರು ಭಕ್ತಾದಿಗಳಿಗೆ ಗ್ರಾಮಸ್ಥರಿಂದ ಅನ್ನಸಂದ್ರಪಣೆ ಕುಡಿಯುವ ನೀರು ಪಾನಕ ಮಜ್ಜಿಗೆ ವಿತರಣೆ ಮಾಡಲಾಯಿತು.

ಯಾವ ಜಾತಿ ಭೇದಭಾವವಿಲ್ಲದೆ ಭಾವೈಕ್ಯತೆಯಿಂದ ಮುಸಲ್ಮಾನರು ಕೂಡ ಬಂದಿದ್ದ ಭಕ್ತಾದಿಗಳಿಗೆ ಪಾನಕ ಹೆಸರು ಬೇಳೆ ವಿತರಿಸಿದ್ದು ಬಹಳ ವಿಶೇಷವಾಗಿತ್ತು. 13 ದಿನಗಳ ಕಾಲ ನಡೆಯುವ ಜಾತ್ರೆಗೆ ರಾಜ್ಯದ ಮೂಲೆ ಮೂಲೆಯಿಂದ ಭಕ್ತಾದಿಗಳು ಆಗಮಿಸುತ್ತಾರೆ.

ಕೊನೆಯ ದಿನ ನಡೆಯುವ ಜಲದಿ ಮಹೋತ್ಸವ ಪುರಾತನ ಕಾಲದ ವಿಶಿಷ್ಟ ಆಚರಣೆಯಾಗಿದ್ದು ಅಪಾರ ಸಂಖ್ಯೆಯ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದೆ. ವಿಜೃಂಭಣೆಯಾಗಿ ನಡೆಯುತ್ತಿರುವ ಈ ಜಾತ್ರಾ ಮಹೋತ್ಸವಕ್ಕೆ ಎಲ್ಲ ಭಕ್ತಾದಿಗಳು ಆಗಮಿಸಿ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಕೃಪೆಗೆ ಪಾತ್ರರಾಗಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *