ಯುದ್ಧದ ಪರಿಣಾಮ: ವೈದ್ಯಕೀಯ ಕ್ಷೇತ್ರಕ್ಕೆ ಭಾರೀ ಹೊಡೆತ ಆತಂಕ.

ಯುದ್ಧದ ಪರಿಣಾಮ: ವೈದ್ಯಕೀಯ ಕ್ಷೇತ್ರಕ್ಕೆ ಭಾರೀ ಹೊಡೆತ ಆತಂಕ.

ರಾಜ್ಯದ ಅತಿದೊಡ್ಡ ಸಿರಿಂಜ್ ಉತ್ಪಾದನಾ ಘಟಕ ಸ್ಥಗಿತ ಆತಂಕ.

ಹುಬ್ಬಳ್ಳಿಇರಾನ್ ಮೇಲೆ ಅಮೆರಿಕಾ ಮತ್ತು ಇಸ್ರೇಲ್ ನಡೆಸುತ್ತಿರುವ ಯುದ್ದದಿಂದಾಗಿ ಈಗಾಗಲೇ ಕಮರ್ಷಿಯಲ್ ಸಿಲಿಂಡರ್ ಅಭಾವ ಉಂಟಾಗಿದೆ. ಆಮದು, ರಫ್ತು ಮೇಲೆ ಬೀರಿದ ಪರಿಣಾಮದಿಂದ ಅನೇಕ ವಸ್ತುಗಳ ಬೆಲೆ ಹೆಚ್ಚಳವಾಗಿವೆ. ಇದೇ ರೀತಿ ಯುದ್ಧ ಮುಂದವರಿದರೆ ವೈದ್ಯಕೀಯ  ವಸ್ತುಗಳಿಗೆ ಕೂಡ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗುವ ಆತಂಕ ಎದುರಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚು ಬಳಕೆಯಾಗುವ ಇಂಜೆಕ್ಷನ್ ಸಿರಿಂಜ್, ಐವಿ ಕೆನಾಲ್ ಸೇರಿದಂತೆ ಇನ್ನಿತರ ವಸ್ತುಗಳ ಉತ್ಫಾದನೆಗೆ ಕಚ್ಚಾವಸ್ತುವಿನ ಕೊರತೆ ಆರಂಭವಾಗಿದೆ. ಬಹುತೇಕ ಘಟಕಗಳು ಕಚ್ಚಾವಸ್ತುಗಳಿಲ್ಲದೇ ಬಂದ್ ಆಗುವ ಸ್ಥಿತಿಗೆ ತಲುಪಿವೆ.

ಸಿರಿಂಜ್ಬೆಲೆ ಏರಿಕೆ

ಹುಬ್ಬಳ್ಳಿ ರಕ್ಷಂ ಮೆಡಿಕಲ್ ಡಿವೈಸ್ ಕಂಪನಿಯಲ್ಲಿ ಮೂರು ಶಿಫ್ಟ್​ನಲ್ಲಿ 300ಕ್ಕೂ ಅಧಿಕ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಆದರೆ ಇದೀಗ ಕಚ್ಚಾವಸ್ತುಗಳ ಪೂರೈಕೆ ಕಡಿಮೆ ಆಗಿದ್ದರಿಂದ ಎರಡು ಶಿಫ್ಟ್​ ಕ್ಯಾನ್ಸಲ್ ಮಾಡಿದ್ದು, ಕೇವಲ ಒಂದೇ ಒಂದು ಶಿಫ್ಟ್​ನಲ್ಲಿ ಮಾತ್ರ ಕೆಲಸ ನಡೆಯುತ್ತಿದೆ. ಇದೀಗ ಬರುತ್ತಿರುವ ಕಚ್ಚಾವಸ್ತುವು ಬರದೇ ಇದರೆ ಸಿರಿಂಜ್ ತಯಾರಾಗುವ ಘಟಕವನ್ನು ಬಂದ್ ಮಾಡಬೇಕಾಗುತ್ತದಯಂತೆ. ಇದರಿಂದ ಮುಂದಿನ ದಿನಗಳಲ್ಲಿ ಸಿರಿಂಜ್​ ಬೆಲೆ ಏರಿಕೆ ಜೊತೆಗೆ ಅವುಗಳು ಸಿಗದಂತಾಗಬಹುದು. ರೋಗಿಗಳಿಗೆ ಇದರಿಂದ ದೊಡ್ಡ ಮಟ್ಟದ ಹೊಡೆತ ಬೀಳಲಿದೆಯಂತೆ.

ಸದ್ಯ ಎಲ್ಲರು ಕೇವಲ ಪೆಟ್ರೋಲ್, ಡಿಸೇಲ್, ಕಮರ್ಷಿಯಲ್ ಸಿಲಿಂಡರ್ ಕೊರತೆ ಬಗ್ಗೆ ಮಾತ್ರ ಚಿಂತಿಸುತ್ತಿದ್ದಾರೆ. ಆದರೆ ವೈದ್ಯಕೀಯ ಕ್ಷೇತ್ರದ ಮೇಲೆ ಉಂಟಾಗಲಿರುವ ಪರಿಣಾಮದ ಬಗ್ಗೆ ಯಾರು ಗಂಭೀರವಾಗಿಲ್ಲ. ವೈದ್ಯಕೀಯ ವಸ್ತುಗಳು ಸಿಗದಿದ್ದರೆ ಅನೇಕರ ಜೀವಕ್ಕೆ ಅಪಾಯವಾಗುವ ಆತಂಕ ಎದುರಾಗಿದೆ.

ಸದ್ಯ ಕೇಂದ್ರ ಸರ್ಕಾರ ವೈದ್ಯಕೀಯ ಕ್ಷೇತ್ರಕ್ಕೆ ಬೇಕಾದ ವಸ್ತುಗಳು ತಯಾರಾಗಲು ಬೇಕಾದ ಕಚ್ಚಾವಸ್ತುಗಳನ್ನು ಪೂರೈಕೆ ಮಾಡೋದರ ಬಗ್ಗೆ ಹೆಚ್ಚು ಗಮನಹರಿಸಬೇಕಿದೆ. ಇಲ್ಲದೇ ಇದರೆ ಭವಿಷ್ಯದಲ್ಲಿ ಆರೋಗ್ಯ ಕ್ಷೇತ್ರದ ಮೇಲೆ ಯುದ್ದದ ದುಷ್ಪರಿಣಾಮಗಳು ದೊಡ್ಡಮಟ್ಟದಲ್ಲಿ ಆಗುವ ಸಾಧ್ಯತೆಯಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *