ಸಿಎಸ್ಕೆ ಅಭಿಮಾನಿಗಳಿಗೆ ಕೊನೆಗೂ ಸಿಕ್ಕಿತು ಗುಡ್ ನ್ಯೂಸ್
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್, ಈ ಬಾರಿಯ 19ನೇ ಸೀಸನ್ನಲ್ಲಿ ಕಳಪೆ ಆರಂಭವನ್ನು ಪಡೆದುಕೊಂಡಿದೆ. ಸಿಎಸ್ಕೆ ತನ್ನ ಸೀಸನ್ನ ಆರಂಭಿಕ ಪಂದ್ಯದಲ್ಲೇ ರಾಜಸ್ಥಾನ ರಾಯಲ್ಸ್ ವಿರುದ್ಧ ಎಂಟು ವಿಕೆಟ್ಗಳ ಹೀನಾಯ ಸೋಲನ್ನು ಅನುಭವಿಸಿತು. ಸಿಎಸ್ಕೆ ಋತುವಿನ ಆರಂಭಿಕ ಪಂದ್ಯಗಳಲ್ಲಿ ಕೆಲವು ಪ್ರಮುಖ ಆಟಗಾರರಿಲ್ಲದೆ ಕಣಕ್ಕಿಳಿಯುತ್ತಿದೆ. ಮುಖ್ಯವಾಗಿ ತಂಡದ ಸ್ಟಾರ್ ಪ್ಲೇಯರ್, ಮಾಜಿ ನಾಯಕ ಎಂಎಸ್ ಧೋನಿ.
ಧೋನಿ ಐಪಿಎಲ್ 2026 ರ ಸೀಸನ್ನ ಮೊದಲ ಎರಡು ವಾರಗಳ ಕಾಲ ಕಣಕ್ಕಿಳಿಯುವುದಿಲ್ಲ. ಅವರು ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದು, ಪುನರ್ವಸತಿಗೆ ಒಳಗಾಗಿದ್ದಾರೆ. ಪರಿಣಾಮವಾಗಿ, ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯಕ್ಕಾಗಿ ಅವರು ಸಿಎಸ್ಕೆ ತಂಡದೊಂದಿಗೆ ಗುವಾಹಟಿಗೆ ಪ್ರಯಾಣಿಸಲಿಲ್ಲ. ಇದರಿಂದ ಅವರ ಅಭಿಮಾನಿಗಳು ತೀರ್ವ ಬೇಸರಗೊಂಡಿದ್ದರು. ಆದರೀಗ ಧೋನಿಯ ಫಿಟ್ನೆಸ್ಗೆ ಸಂಬಂಧಿಸಿದ ವಿಡಿಯೋ ಹೊರಬಂದಿದೆ, ಇದನ್ನು ಕಂಡು ಸಿಎಸ್ಕೆ ಅಭಿಮಾನಿಗಳು ಫುಲ್ ಖುಷಿ ಆಗಿದ್ದಾರೆ.
ಲಯ ಕಳೆದುಕೊಂಡ ಚೆನ್ನೈ
ಕಳೆದ ಕೆಲವು ಐಪಿಎಲ್ ಋತುಗಳು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ನೀಡಿಲ್ಲ. ಐಪಿಎಲ್ 2026 ರಲ್ಲಿ ಸಿಎಸ್ಕೆ ತನ್ನ ಮುಂದಿನ ಪಂದ್ಯ ಪಂಜಾಬ್ ಕಿಂಗ್ಸ್ ವಿರುದ್ಧ ಆಡಲಿದೆ. ಆದರೆ ಇವರ ವಿರುದ್ಧವೂ ಸಿಎಸ್ಕೆ ತಂಡದ ದಾಖಲೆ ಅದ್ಭುತ ಎಂಬಂತಿಲ್ಲ. ಇಲ್ಲಿಯವರೆಗೆ ಎರಡೂ ತಂಡಗಳ ನಡುವೆ ಒಟ್ಟು 32 ಪಂದ್ಯಗಳು ನಡೆದಿದ್ದು, ಸಿಎಸ್ಕೆ 16 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಂಜಾಬ್ ಕಿಂಗ್ಸ್ ಕೂಡ 16 ಪಂದ್ಯಗಳಲ್ಲಿ ಗೆದ್ದಿದೆ. ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಉಭಯ ತಂಡಗಳ ನಡುವೆ ಒಂಬತ್ತು ಪಂದ್ಯಗಳು ನಡೆದಿದ್ದು, ಸಿಎಸ್ಕೆ ನಾಲ್ಕು ಪಂದ್ಯಗಳಲ್ಲಿ ಗೆದ್ದಿದ್ದರೆ, ಪಂಜಾಬ್ ಕಿಂಗ್ಸ್ ಐದು ಪಂದ್ಯಗಳಲ್ಲಿ ಗೆದ್ದಿದೆ.
For More Updates Join our WhatsApp Group :




