ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾವು; ತಾಯಿ ಆತ್ಮಹತ್ಯೆ.
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಬಕೆಟ್ ನೀರಿನಲ್ಲಿ ಮುಳುಗಿ ಮಗು ಮೃತಪಟ್ಟಿದೆ. ಮಗುವಿನ ಸಾವಿಗೆ ನಾನೇ ಕಾರಣ ಎಂಬ ಅಪರಾಧ ಪ್ರಜ್ಞೆಯಿಂದ ಮನನೊಂದ ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದು, ಕೆಲಸ ಮುಗಿಸಿ ಮನೆಗೆ ಬಂದ ಆಕೆಯ ಪತಿಗೆ ಆಘಾತ ಕಾದಿತ್ತು. ಈ ದಾರುಣ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ನಡೆದಿದೆ.
ಡೆತ್ ನೋಟ್ನಲ್ಲಿ ಬಿಚ್ಚಿಟ್ಟ ಸತ್ಯ
ರಾತ್ರಿ ಪತಿ ಮಹಾಂತೇಶ್ ಕೆಲಸ ಮುಗಿಸಿ ಮನೆಗೆ ಬಂದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ತಮ್ಮ ಬಳಿಯಿದ್ದ ಕೀಲಿಯಿಂದ ಬಾಗಿಲು ತೆರೆದು ಒಳಹೋದಾಗ ಪ್ರತಿಭಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಗು ಹಾಸಿಗೆಯ ಮೇಲೆ ಮಲಗಿದ ಸ್ಥಿತಿಯಲ್ಲಿತ್ತು.
ಸ್ಥಳದಲ್ಲಿ ಪತ್ತೆಯಾದ ಡೆತ್ ನೋಟ್ನಿಂದ ಪತಿಗೆ ಸಾವಿನ ರಹಸ್ಯ ಗೊತ್ತಾಗಿದೆ. ‘ನನ್ನ ಮಗುವಿನ ಸಾವಿಗೆ ನಾನೇ ಕಾರಣ, ಅವನನ್ನು ಉಳಿಸಿಕೊಳ್ಳಲು ನನ್ನಿಂದ ಸಾಧ್ಯವಾಗಲಿಲ್ಲ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಪ್ರತಿಭಾ ಡೆತ್ನೋಟ್ನಲ್ಲಿ ಬರೆದಿಟ್ಟಿದ್ದರು. ನೇಣಿಗೆ ಶರಣಾಗುವ ಮುನ್ನ ಪ್ರತಿಭಾ ಅವರು 15 ಮಾತ್ರೆಗಳನ್ನು ನುಂಗಿ, ಕೈ ಕುಯ್ದುಕೊಂಡು ಸಾಯುವುದಕ್ಕೆ ಯತ್ನಿಸಿದ್ದರು. ಆದರೆ ರಕ್ತ ಬಾರದ ಕಾರಣ ಕೊನೆಗೆ ಫ್ಯಾನ್ಗೆ ನೇಣು ಹಾಕಿಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ.
ಚಂದ್ರಾಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
For More Updates Join our WhatsApp Group :




