ಜಿಮ್ನಲ್ಲಿ ಪರಿಚಯವಾದ ಯುವತಿಯೊಂದಿಗೆ ಸಂಬಂಧ ಬೆಳೆಸಿ ಮತಾಂತರ ಪ್ರಯತ್ನ ಆರೋಪ
ಹುಬ್ಬಳ್ಳಿ: ಛೋಟಾ ಬಾಂಬೆ ಎಂದೇ ಹೆಸರುವಾಸಿಯಾರುವ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಹುಬ್ಬಳಿಯ ವಿಜಯನಗರದ ನಿವಾಸಿ ಸಮೀರ್, ಹಿಂದೂ ಯುವತಿಯನ್ನು ಪರಿಚಯಿಸಿಕೊಂಡು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದಾನೆಂದು ಹಿಂದೂ ಸಂಘಟನೆಗಳು ಆರೋಪಿಸಿದ್ದು, ಈ ಸಂಬಂಧ ಹಿಂದು ಕಾರ್ಯಕರ್ತರು ಸಮೀರ್ ನನ್ನು ಹಿಡಿದು ಹಳೇ ಹುಬ್ಬಳ್ಳಿ ಠಾಣೆಗೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಹುಬ್ಬಳ್ಳಿ ನಗರದ ವಿಕಾಸ ನಗರದ ಯುವತಿಯನ್ನು ಸಮೀರ್ ಜಿಮ್ ನಲ್ಲಿ ಪರಿಚಯಿಸಿಕೊಂಡಿದ್ದು, ಬಳಿಕ ಲವ್ ಜಿಹಾದ್ ಮಾಡುತ್ತಿದ್ದಾನೆಂದು ಆರೋಪಿಸಲಾಗಿದೆ. ಈ ಬಗ್ಗೆ ಹಳೇ ಹುಬ್ಬಳ್ಳಿ ಪೊಲೀಸರು ತನಿಖೆ ನಡೆಸಿದ್ದಾರೆ.
For More Updates Join our WhatsApp Group :




