ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿರುವ ಫಲಿತಾಂಶವು ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯ
ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಏಪ್ರಿಲ್ 8ರಂದು ಪ್ರಕಟವಾಗುವ ಸಾಧ್ಯತೆಯಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಫಲಿತಾಂಶ ಬಿಡುಗಡೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ.ಈ ಹಿಂದಿನ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಏಪ್ರಿಲ್ 7ರಂದು ಫಲಿತಾಂಶ ಹೊರಬರಬೇಕಿತ್ತು. ಆದರೆ ಕೆಲವು ಕಾರಣಗಳಿಂದಾಗಿ ಇದು ಒಂದು ದಿನ ಮುಂದೂಡಲ್ಪಟ್ಟಿದೆ.
ಫಲಿತಾಂಶ ಪ್ರಕಟಣೆಯ ಕುರಿತು ಇಲಾಖೆಯು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಈಗಾಗಲೇ ಪತ್ರ ಬರೆದಿದೆ. ಸಚಿವರ ಲಭ್ಯತೆಯನ್ನು ಆಧರಿಸಿ ಅಧಿಕೃತವಾಗಿ ಫಲಿತಾಂಶ ಹೊರಬೀಳಲಿದೆ.ತಾಂತ್ರಿಕ ಕೆಲಸಗಳು ಹಾಗೂ ಅಂಕಗಳ ಕ್ರೋಡೀಕರಣ ಪ್ರಕ್ರಿಯೆ ಮುಗಿದಿದ್ದು, ಏಪ್ರಿಲ್ 8ರಂದು ರಿಸಲ್ಟ್ ನೀಡಲು ಇಲಾಖೆ ಉತ್ಸುಕವಾಗಿದೆ.
ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಹೆಚ್ಚಿನ ಅಧಿಕೃತ ಮಾಹಿತಿಗಾಗಿ ಶಿಕ್ಷಣ ಇಲಾಖೆಯ ಮುಂದಿನ ಪ್ರಕಟಣೆಯನ್ನು ನಿರೀಕ್ಷಿಸಲಾಗಿದೆ.
For More Updates Join our WhatsApp Group :




