“ನನಗೆ ಉದ್ಯಮಿ ಜೊತೆ ಮದುವೆ, ಮಕ್ಕಳೂ ಇದ್ದಾರೆ” – ತ್ರಿಶಾ ಸ್ಪಷ್ಟಪಡಿಸಿದ್ರು.

“ನನಗೆ ಉದ್ಯಮಿ ಜೊತೆ ಮದುವೆ, ಮಕ್ಕಳೂ ಇದ್ದಾರೆ” – ತ್ರಿಶಾ ಸ್ಪಷ್ಟಪಡಿಸಿದ್ರು.

ದಕ್ಷಿಣ ಭಾರತದ ಖ್ಯಾತ ನಟಿ Trisha Krishnan ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಸ್ಪಷ್ಟನೆ ನೀಡಿದಳು.

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್  ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಲ್ಲಿದ್ದಾರೆ. ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಜೊತೆಗಿನ ರಿಲೇಷನ್​ಶಿಪ್ ಕಾರಣದಿಂದ ಅವರು ಚರ್ಚೆಗೆ ಆಹಾರ ಆಗಿದ್ದಾರೆ. ಈ ನಡುವೆ ಚಿತ್ರರಂಗದಿಂದ ಅವರು ಹೊರಬರುತ್ತಾರೆ ಎನ್ನುವ ವದಂತಿಗಳು ಕಾಲಿವುಡ್ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿವೆ. ಇದೀಗ ಈ ಎಲ್ಲಾ ಗಾಸಿಪ್​ಗಳಿಗೆ ತ್ರಿಶಾ ಅವರು ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ.

ಖ್ಯಾತ ಪತ್ರಕರ್ತ ಮತ್ತು ನಟ ಚಿತ್ರಾ ಲಕ್ಷ್ಮಣನ್ ಅವರು ತಮ್ಮ ‘ಟೂರಿಂಗ್ ಟಾಕೀಸ್’ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡುತ್ತಾ, ‘ತ್ರಿಶಾ ಅವರು ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸದಿರಲು ತೀರ್ಮಾನಿಸಿದ್ದಾರೆ ಎಂದು ಹಲವು ನಿರ್ಮಾಪಕರು ಹೇಳುತ್ತಿದ್ದಾರೆ’ ಎಂದು ತಿಳಿಸಿದ್ದರು. ತ್ರಿಶಾ ಇತ್ತೀಚೆಗೆ ಯಾವುದೇ ಹೊಸ ಸಿನಿಮಾಗಳಿಗೆ ಸಹಿ ಮಾಡದಿರುವುದು ಈ ಅನುಮಾನಕ್ಕೆ ತುಪ್ಪ ಸುರಿದಂತಾಗಿತ್ತು.

ತಮ್ಮ ನಿವೃತ್ತಿ ಹಾಗೂ ಮದುವೆಯ ಬಗ್ಗೆ ಹಬ್ಬಿರುವ ಸುದ್ದಿಯನ್ನು ಕಂಡು ಕೆಂಡಾಮಂಡಲವಾದ ತ್ರಿಶಾ, ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ. ‘ನಾನು ಸಿನಿಮಾಗಳನ್ನು ಬಿಟ್ಟಿದ್ದೇನಂತೆ. ಒಬ್ಬ ಶ್ರೀಮಂತ ಉದ್ಯಮಿಯನ್ನು ಮದುವೆಯಾಗಿದ್ದೇನಂತೆ. ಅಷ್ಟೇ ಅಲ್ಲದೇ, ನನಗೆ ನಾಲ್ಕು ಜನ ಮಕ್ಕಳಿದ್ದು ಅವರಿಗೆ ನಿನ್ನೆ ಎರಡನೇ ವರ್ಷದ ಹುಟ್ಟುಹಬ್ಬವೂ ಮುಗಿದಿದೆಯಂತೆ. ಇಂದಿನ ಕಲ್ಪಿತ ಕಥೆಯ ಕೋಟಾ ಮುಗಿಯಿತೇ ಅಥವಾ ನಾನು ಇನ್ನೂ ಏನಾದರೂ ಸೇರಿಸಬೇಕೇ’ ಎಂದು ಬರೆದುಕೊಳ್ಳುವ ಮೂಲಕ ವದಂತಿಗಳನ್ನು ತಳ್ಳಿಹಾಕಿದ್ದಾರೆ.

ತ್ರಿಶಾ ಚಿತ್ರರಂಗ ಬಿಡುತ್ತಾರೆ ಎಂಬುದು ಕೇವಲ ವದಂತಿ ಎಂಬುದು ಅವರ ಮುಂಬರುವ ಚಿತ್ರಗಳ ಪಟ್ಟಿಯನ್ನು ನೋಡಿದರೆ ತಿಳಿಯುತ್ತದೆ. 2025ರಲ್ಲಿ ‘ವಿದಾಮುಯರ್ಚಿ’, ‘ಗುಡ್ ಬ್ಯಾಡ್ ಅಗ್ಲಿ’, ‘ಥಗ್ ಲೈಫ್’ ಚಿತ್ರಗಳಲ್ಲಿ ತ್ರಿಶಾ ಅವರು ಕಾಣಿಸಿಕೊಂಡಿದ್ದರು. ‘ಕರುಪ್ಪು’, ‘ವಿಶ್ವಂಭರ’ ಮುಂತಾದ ಸಿನಿಮಾಗಳು ಈಗ ಅವರ ಕೈಯಲ್ಲಿವೆ. ಆ ಸಿನಿಮಾಗಳ ಬಿಡುಗಡೆಗೆ ಫ್ಯಾನ್ಸ್ ಕಾದಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *