1430 ಮಂದಿ ಚುನಾವಣಾ ಸಿಬ್ಬಂದಿಯ ಆರೋಗ್ಯಕ್ಕೆ ವಿಶೇಷ ಕ್ರಮ.
ದಾವಣಗೆರೆ : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಅಂತಿಮ ಸಿದ್ಧತೆಗಳು ಭರದಿಂದ ಸಾಗಿವೆ. ಈ ಚುನಾವಣೆಯಲ್ಲಿ ಭಾಗವಹಿಸುವ 1430 ಮಂದಿ ಚುನಾವಣಾ ಸಿಬ್ಬಂದಿಗಳ ಆರೋಗ್ಯ ಸುರಕ್ಷತೆಗೆ ಜಿಲ್ಲಾಡಳಿತ ವಿಶೇಷ ಗಮನ ಹರಿಸಿದೆ. ಹೃದಯಾಘಾತ, ರಕ್ತದೊತ್ತಡದಂತಹ ಸಮಸ್ಯೆಗಳಿಂದ ಬಳಲುತ್ತಿರುವ ಸಿಬ್ಬಂದಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಮತಗಟ್ಟೆಗಳಲ್ಲೇ ವೈದ್ಯಾಧಿಕಾರಿಗಳನ್ನು ನಿಯೋಜಿಸಲಾಗಿದೆ.
ಅವರಿಗೆ ಪ್ರಾಥಮಿಕ ಚಿಕಿತ್ಸೆ ಮತ್ತು ಆರೋಗ್ಯ ತಪಾಸಣೆಯ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಮತದಾನವನ್ನು ಹೆಚ್ಚಿಸುವ ಉದ್ದೇಶದಿಂದ ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಆರೋಗ್ಯ ಸಮಸ್ಯೆಗಳಿಂದ ಮತಗಟ್ಟೆಗೆ ಬರಲು ಕಷ್ಟಪಡುವ ಮತದಾರರಿಗಾಗಿ ಜಿಲ್ಲಾಡಳಿತವು ಉಚಿತ ವಾಹನ ಸೌಲಭ್ಯವನ್ನು ಒದಗಿಸಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಎಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.
For More Updates Join our WhatsApp Group :



