ಬಾಗಲಕೋಟೆ ಉಪಚುನಾವಣೆ: ಬೆಳಗ್ಗೆಯೇ ಜೋರಾದ ಮತದಾನ

ಬಾಗಲಕೋಟೆ ಉಪಚುನಾವಣೆ: ಬೆಳಗ್ಗೆಯೇ ಜೋರಾದ ಮತದಾನ

 ಮತಗಟ್ಟೆಗಳಲ್ಲಿ ಉತ್ಸಾಹಭರಿತ ವಾತಾವರಣ

ಬಾಗಲಕೋಟೆ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯುತ್ತಿದೆ. ಹೆಚ್. ವೈ. ಮೇಟಿ ಅವರ ಅಕಾಲಿಕ ನಿಧನದಿಂದ ತೆರವಾದ ಈ ಕ್ಷೇತ್ರಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಎರಡೂ ಪಕ್ಷಗಳ ಪ್ರಮುಖ ನಾಯಕರು ತೀವ್ರ ಪ್ರಚಾರ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರು ದಿನಗಳ ಕಾಲ ಕ್ಷೇತ್ರದಲ್ಲಿ ಬೀಡುಬಿಟ್ಟು ಪ್ರಚಾರ ಮಾಡಿದರೆ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವಿ. ಸೋಮಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಅನೇಕ ಘಟಾನುಘಟಿ ನಾಯಕರು ಪ್ರಚಾರದಲ್ಲಿ ಭಾಗಿಯಾಗಿದ್ದರು.

ಮತದಾರರು ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸುತ್ತಿದ್ದು, ಸರದಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ. ಈ ಉಪಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದೆ. ಕ್ಷೇತ್ರದಲ್ಲಿ ಒಟ್ಟು 2,59,797 ಮತದಾರರಿದ್ದು, 322 ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆಯುತ್ತಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *