ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಆರಂಭ.
ಬೆಂಗಳೂರು : ಬೆಂಗಳೂರು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ವಿಂಡೋ ಟ್ರೇಲಿಂಗ್ ಮೂಲಕ ಬೆಂಗಳೂರು–ಮೈಸೂರು ರೈಲು ಮಾರ್ಗದ ಪರಿವೀಕ್ಷಣೆಯನ್ನು ಆರಂಭಿಸಿದರು.
ಈ ವೇಳೆ ಒಡೆಯರ್ ಎಕ್ಸ್‌ಪ್ರೆಸ್ ರೈಲು ರಾಮನಗರ ನಿಲ್ದಾಣದಲ್ಲಿ ನಿಲುಗಡೆಗೆ ರೈಲ್ವೆ ಮಂಡಳಿಯಿಂದ ಅನುಮತಿ ದೊರೆತಿರುವುದಾಗಿ ತಿಳಿದುಬಂದಿದೆ. ಈ ನಿಲುಗಡೆಗಾಗಿ ಕುಮಾರಸ್ವಾಮಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಸಚಿವರ ಅನುಕೂಲಕರ ಸಮಯದಲ್ಲಿ ನಿಲುಗಡೆ ಕಾರ್ಯಕ್ರಮವನ್ನು ಅಧಿಕೃತವಾಗಿ ಆರಂಭಿಸುವುದಾಗಿ ತಿಳಿಸಿದ್ದಾರೆ.
ಪರಿವೀಕ್ಷಣೆಯಲ್ಲಿ ದಕ್ಷಿಣ ನೈರುತ್ಯ ರೈಲ್ವೆ ವಿಭಾಗದ ಹಿರಿಯ ಅಧಿಕಾರಿಗಳು, ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು. ಮಾರ್ಗದ ಉದ್ದಕ್ಕೂ ನಿರ್ಮಾಣವಾಗುತ್ತಿರುವ ಅಂಡರ್‌ಪಾಸ್ ಮತ್ತು ಮೇಲ್ಸೇತುವೆ ಕಾಮಗಾರಿಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಪ್ರಗತಿ ಅವಲೋಕನ ನಡೆಸಿದರು.
ಇದಲ್ಲದೆ ಮಂಡ್ಯ, ರಾಮನಗರ ಮತ್ತು ಮೈಸೂರು ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಬಾಕಿ ರೈಲ್ವೆ ಯೋಜನೆಗಳ ಕುರಿತು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಅಭಿವೃದ್ಧಿ ಕಾರ್ಯಗಳನ್ನು ವೇಗಗೊಳಿಸುವ ಕುರಿತು ಸೂಚನೆ ನೀಡಿದರು.
For More Updates Join our WhatsApp Group :




