ಬೆಂಗಳೂರು ಏರ್‌ಪೋರ್ಟ್‌ನಲ್ಲಿ Face recognition !

ಬೆಂಗಳೂರು ಏರ್‌ಪೋರ್ಟ್‌ನಲ್ಲಿ Face recognition !

ಪಾಸ್ಪೋರ್ಟ್ ಬೇಡ, ಮುಖ ಸ್ಕ್ಯಾನ್ ಮಾಡಿ ಮಾತ್ರ ಸಾಕು.!

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ದೇಶೀಯ ಪ್ರಯಾಣಿಕರಿಗೆ ನೀಡುತ್ತಿದ್ದ ‘ಡಿಜಿ ಯಾತ್ರಾ’ ಸ್ಪರ್ಶರಹಿತ ತಂತ್ರಜ್ಞಾನವನ್ನು ಈಗ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ವಿಸ್ತರಿಸಿದೆ. ಟಿಕೆಟ್ ಬುಕ್ಕಿಂಗ್‌ದಿಂದ ಬೋರ್ಡಿಂಗ್ ವರೆಗೆ ಸಂಪೂರ್ಣ ಸಂಪರ್ಕರಹಿತ ಪ್ರಯಾಣದ ತಂತ್ರಜ್ಞಾನ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ.

ಭಾರತದಲ್ಲಿ ಇದೇ ಮೊದಲು!

ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹದೊಂದು ವಿನೂತನ ಪ್ರಯೋಗ ನಡೆದಿದ್ದು, ಜಾಗತಿಕ ಮಟ್ಟದಲ್ಲಿ ತಡೆರಹಿತ ವಿಮಾನ ಪ್ರಯಾಣ ವ್ಯವಸ್ಥೆಯ ಅನುಷ್ಠಾನದತ್ತ ಇದು ಮಹತ್ವದ ಹೆಜ್ಜೆ ಎಂದೇ ಪರಿಗಣಿಸಲಾಗಿದೆ. ಈ ವರ್ಷದ ಆರಂಭದಲ್ಲಿ ಇಂಡಿಗೋ ಹಾಗೂ ಡಿಜಿ ಯಾತ್ರಾ ಫೌಂಡೇಶನ್ ಸಂಸ್ಥೆಗಳು, ಪ್ರಯಾಣಿಕರ ದತ್ತಾಂಶ ಸುರಕ್ಷತೆಗಾಗಿ ‘ಸೆಲ್ಫ್-ಸೋವರಿನ್ ಐಡೆಂಟಿಟಿ’ (ಎಸ್‌ಎಸ್‌ಐ) ಎಂಬ ಸ್ವಯಂ-ಗುರುತು ವ್ಯವಸ್ಥೆ ಹಾಗೂ ಬೋರ್ಡಿಂಗ್ ಪಾಸ್‌ಗಳನ್ನು ಸುಲಭವಾಗಿ ವರ್ಗಾಯಿಸಲು ‘ಆ್ಯಪ್-ಟು-ಆ್ಯಪ್’ ತಂತ್ರಜ್ಞಾನವನ್ನು ಪರಿಚಯಿಸಿದ್ದವು. ಇದೇ ಯಶಸ್ವಿ ಮಾದರಿಯನ್ನು ಇದೀಗ ಬಿಐಎಎಲ್ ನೆರವಿನೊಂದಿಗೆ ಅಂತಾರಾಷ್ಟ್ರೀಯ ಪ್ರಯಾಣಕ್ಕೂ ವಿಸ್ತರಿಸಿ, ಅದರ ಕಾರ್ಯಸಾಧ್ಯತೆಯನ್ನು ಯಶಸ್ವಿಯಾಗಿ ಸಾಬೀತುಪಡಿಸಲಾಗಿದೆ.

ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ಈ ತಂತ್ರಜ್ಞಾನದ ಅಳವಡಿಕೆಯು ಪ್ರಯಾಣದ ಸಮಯವನ್ನು ಉಳಿಸುವುದಲ್ಲದೆ, ಭದ್ರತೆಯನ್ನೂ ಹೆಚ್ಚಿಸಲಿದೆ. ವಿಶೇಷವೆಂದರೆ, ಸ್ಪರ್ಶರಹಿತ ಪ್ರಯಾಣ ವ್ಯವಸ್ಥೆಯನ್ನು ಜಾಗತಿಕ ಮಟ್ಟದಲ್ಲಿ ಜಾರಿಗೆ ತರುವ ಈ ಪ್ರತಿಷ್ಠಿತ ಯೋಜನೆಯಲ್ಲಿ ಪಾಲ್ಗೊಂಡಿರುವ ಭಾರತದ ಏಕೈಕ ಏರ್​​ಪೋರ್ಟ್​​ಎಂಬ ಹೆಗ್ಗಳಿಕೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾಜನವಾಗಿದೆ.

ಈ ತಂತ್ರಜ್ಞಾನ ‘ಸೆಲ್ಫ್-ಸೋವೆರಿನ್ ಐಡೆಂಟಿಟಿ’ (SSI) ಮಾದರಿಯನ್ವಯ ಕೆಲಸ ಮಾಡಲಿದೆ. ಇದರಿಂದ ವ್ಯಕ್ತಿಯ ಗುರುತು ಸುರಕ್ಷಿತವಾಗಿ ಸಂಗ್ರಹವಾಗಿದ್ದು, ತಕ್ಷಣವೇ ವಿವಿಧ ವ್ಯವಸ್ಥೆಗಳ ಮೂಲಕ ಪರಿಶೀಲನೆಗೊಳಗಾಗುತ್ತದೆ. ಇದಲ್ಲದೆ, ಏರ್‌ಲೈನ್ ಆ್ಯಪ್‌ಗಳು ಮತ್ತು ವಿಮಾನ ನಿಲ್ದಾಣ ವ್ಯವಸ್ಥೆಗಳು ಪರಸ್ಪರ ಸಂಪರ್ಕ ಹೊಂದಿದ್ದು, ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್ ಮತ್ತು ಪ್ರಯಾಣ ವಿವರಗಳು ಸ್ವಯಂಚಾಲಿತವಾಗಿ ಲಭ್ಯವಾಗುತ್ತವೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *